Advertisement

ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ ಇಂಗ್ಲೆಂಡ್ ಆಲ್ ರೌಂಡರ್ ಮೋಯಿನ್ ಅಲಿ

08:40 AM Sep 27, 2021 | Team Udayavani |

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಆಲ್ ರೌಂಡರ್ ಮೋಯಿನ್ ಅಲಿ ಅವರು ಟೆಸ್ಟ್ ಕ್ರಿಕೆಟ್ ಮಾದರಿಗೆ ವಿದಾಯ ಹೇಳಿದ್ದಾರೆ. ಸೀಮಿತ ಓವರ್ ಗಳ ಕ್ರಿಕೆಟ್ ಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಟೆಸ್ಟ್ ಮಾದರಿಗೆ ವಿದಾಯ ಹೇಳಿರುವುದಾಗಿ ಅಲಿ ಹೇಳಿದ್ದಾರೆ.

Advertisement

34ರ ಹರೆಯದ ಮೋಯಿನ್ ಅಲಿ ಇದುವರೆಗೆ 64 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 2014ರಲ್ಲಿ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಅಲಿ 28.3ರ ಸರಾಸರಿಯಲ್ಲಿ 2914 ರನ್ ಗಳಿಸಿದ್ದಾರೆ. ಐದು ಶತಕ ಮತ್ತು 14 ಅರ್ಧಶತಕ ಗಳಿಸಿದ್ದಾರೆ. ಉಪಯುಕ್ತ ಸ್ಪಿನ್ನರ್ ಆಗಿರುವ ಮೋಯಿನ್ ಅಲಿ ಟೆಸ್ಟ್ ಕ್ರಿಕೆಟ್ ನಲ್ಲಿ 195 ವಿಕೆಟ್ ಕಬಳಿಸಿದ್ದಾರೆ.

ಇದನ್ನೂ ಓದಿ:ಚಿನ್ನದ ಹುಡುಗಿ ಕೆರ್ವಾಶೆಯ ಅಕ್ಷತಾ ಪೂಜಾರಿಗೆ ಅದ್ದೂರಿ ಸ್ವಾಗತ

ಇತ್ತೀಚೆಗೆ ನಡೆದ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಮೋಯಿನ್ ಅಲಿ ಆಡಿದ್ದರು. ಸದ್ಯ ಚೆನ್ನೈ ಸೂಪರ್ ಕಿಂಗ್ಸ್ ಪರ ಐಪಿಎಲ್ ನಲ್ಲಿ ಆಡುತ್ತಿರುವ ಮೋಯಿನ್ ಮುಂದಿನ ದಿನಗಳಲ್ಲಿ ಇಂಗ್ಲೆಂಡ್ ಪರವಾಗಿ ಸೀಮಿತ ಓವರ್ ಕ್ರಿಕೆಟ್ ಮತ್ತು ಕೌಂಟಿ ಕ್ರಿಕೆಟ್ ನಲ್ಲಿ ಆಡುವ ಇರಾದೆ ಹೊಂದಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next