Advertisement

ಹೀನಾಯವಾಗಿ ಸೋತ ಭಾರತಕ್ಕೆ ಮತ್ತೊಂದು ಆಘಾತ: ಟೆಸ್ಟ್ ಸರಣಿಯಿಂದ ಪ್ರಮುಖ ಬೌಲರ್ ಔಟ್

08:09 AM Dec 20, 2020 | keerthan |

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ. ಟೀಂ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಸಂಪೂರ್ಣ ಸರಣಿಯಿಂದಲೇ ಹೊರಬಿದ್ದಿದ್ದಾರೆ.

Advertisement

ಅಡಿಲೇಡ್ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಪ್ಯಾಟ್ ಕಮಿನ್ಸ್ ಎಸೆದ ಬೌನ್ಸರ್ ಶಮಿ ಬಲಗೈಗೆ ಬಡಿದಿತ್ತು. ಈ ವೇಳೆ ಗಾಯಗೊಂಡ ಶಮಿ ಮೈದಾನದಿಂದ ಹೊರನಡೆಯಬೇಕಾಯಿತು.

ಈಗಾಗಲೇ ಇಶಾಂತ್ ಶರ್ಮ ತಂಡದಿಂದ ಹೊರಬಿದ್ದಿರುವ ಕಾರಣ ಭಾರತ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಸದ್ಯ ತಂಡದಲ್ಲಿ ಅನುಭವಿ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ ಮತ್ತು ಉಮೇಶ್ ಯಾದವ್ ಮಾತ್ರ ಉಳಿದಿದ್ದು, ಮುಂದಿನ ಪಂದ್ಯಕ್ಕೆ ನವದೀಪ್ ಸೈನಿ ಅಥವಾ ಮೊಹಮ್ಮದ್ ಸಿರಾಜ್ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಅಡಿಲೇಡ್ ಪಂದ್ಯದಲ್ಲಿ ಭಾರತ 8 ವಿಕೆಟ್ ಅಂತರದ ಸೋಲನುಭವಿಸಿತ್ತು. ಮೊದಲ ಇನ್ನಿಂಗ್ಸ್ ಮುನ್ನಡೆ ಹೊರತಾಗಿಯೂ ಎರಡನೇ ಇನ್ನಿಂಗ್ಸ್ ನಲ್ಲಿ ಕೇವಲ 36 ರನ್ ಗಳಿಗೆ ಆಲ್ ಔಟ್ ಆಗಿ ಸೋಲನುಭವಿಸಬೇಕಾಯಿತು.

Advertisement

Udayavani is now on Telegram. Click here to join our channel and stay updated with the latest news.

Next