ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದೆ ಮುಖ್ಯಮಂತ್ರಿ ಆಗ್ತಾರೆ ಎಂದು ಯೂತ್ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದರು.
ಉಡುಪಿಯಲ್ಲಿ ಮಂಗಳವಾರ ಮೀನುಗಾರರ ಮಹಿಳೆಯರ ಜೊತೆಗೆ ಮಾತನಾಡುತ್ತಾ ಸಿಎಂ ವಿಚಾರ ಪ್ರಸ್ತಾಪಸಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದರು.
ಇದನ್ನೂ ಓದಿ: ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ: ಬೀದರ್ ಜಿಲ್ಲೆಯ ಬಿಎಸ್.ಎಫ್ ಯೋಧ ಹುತಾತ್ಮ
ಮುಂದೆ ಎರಡು ವರ್ಷಗಳಲ್ಲಿ ಚುನಾವಣೆ ಬರುತ್ತದೆ. ಎಲ್ಲರೂ ಮತ ಹಾಕಿದ್ರೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಕಾಂಗ್ರೆಸ್ ನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗ್ತಾರೆ.
ಕಾಂಗ್ರೆಸ್ ನಲ್ಲಿ ಸದ್ಯ ಮುಂದಿನ ಮುಖ್ಯಮಂತ್ರಿ ವಿಚಾರ ಚರ್ಚೆ ಆಗುತ್ತಿದೆ. ಸಿದ್ದು-ಡಿಕೆಶಿ ಬಣದ ನಡುವಿನ ಟಾಕ್ ಫೈಟ್ ಮುಂದುವರೆದಿದೆ.