ಮುಂಬೈ: ಬಾಂಗ್ಲಾದೇಶ ವಿರುದ್ಧ ನಡೆಯಲಿರುವ ಏಕದಿನ ಸರಣಿಯಿಂದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಹೊರಬಿದ್ದಿದ್ದಾರೆ. ಅವರ ಬದಲಿಗೆ ಯುವ ವೇಗಿ ಉಮ್ರಾನ್ ಮಲಿಕ್ ಅವರನ್ನು ಆಯ್ಕೆ ಮಾಡಲಾಗಿದೆ.
ವೇಗದ ಬೌಲರ್ ಮೊಹಮ್ಮದ್ ಶಮಿ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಪೂರ್ವಭಾವಿಯಾಗಿ ನಡೆದ ತರಬೇತಿ ಅವಧಿಯಲ್ಲಿ ಭುಜದ ಗಾಯಕ್ಕೆ ಒಳಗಾಗಿದ್ದರು. ಅವರು ಪ್ರಸ್ತುತ ಬೆಂಗಳೂರಿನ ಎನ್‌ಸಿಎಯಲ್ಲಿ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಮೂರು ಪಂದ್ಯಗಳ ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
ಅವರ ಬದಲಿಗೆ ಕಳೆದ ನ್ಯೂಜಿಲ್ಯಾಂಡ್ ಪ್ರವಾಸದಲ್ಲಿ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿರುವ ಜಮ್ಮು ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಮೂರು ಪಂದ್ಯಗಳ ಏಕದಿನ ಸರಣಿ ಡಿಸೆಂಬರ್ 4ರಂದು ಆರಂಭವಾಗಲಿದೆ. ಮೊದಲರೆಡು ಪಂದ್ಯಗಳು ಢಾಕಾದಲ್ಲಿ ನಡೆಯಲಿದ್ದು, ಮೂರನೇ ಪಂದ್ಯ ಚಿತ್ತಗ್ರಾಮ್ ನಲ್ಲಿ ನಡೆಯಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾ), ಕೆಎಲ್ ರಾಹುಲ್ (ಉ.ನಾ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್ , ಮೊಹಮ್ಮದ್. ಸಿರಾಜ್, ದೀಪಕ್ ಚಹಾರ್, ಕುಲದೀಪ್ ಸೆನ್, ಉಮ್ರಾನ್ ಮಲಿಕ್.