Advertisement

Arjuna Award: ಭಾರತದ ವೇಗಿ ಮೊಹಮ್ಮದ್ ಶಮಿ ಸೇರಿದಂತೆ 26 ಆಟಗಾರರಿಗೆ ಅರ್ಜುನ ಪ್ರಶಸ್ತಿ

03:20 PM Jan 09, 2024 | Team Udayavani |

ನವದೆಹಲಿ: ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ 2023ನೇ ಸಾಲಿನ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Advertisement

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ (ಜ.9) ಶಮಿ ಅವರಿಗೆ ಈ ಪ್ರಶಸ್ತಿಯನ್ನು ಪ್ರಧಾನ ಮಾಡಿದರು. ಇದರೊಂದಿಗೆ ಶಮಿ ಅವರು ಅರ್ಜುನ ಪ್ರಶಸ್ತಿ ಪಡೆದ 58ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಅದೂ ಅಲ್ಲದೆ ಬರೋಬ್ಬರಿ ಎರಡು ವರ್ಷಗಳ ಬಳಿಕ ಕ್ರಿಕೆಟಿಗನೊಬ್ಬ ಅರ್ಜುನ ಪ್ರಶಸ್ತಿ ಪಡೆದುಕೊಂಡಂತಾಗಿದೆ.

ಅರ್ಜುನ ಪ್ರಶಸ್ತಿ ಪಡೆದವರಲ್ಲಿ 12 ಮಹಿಳಾ ಕ್ರಿಕೆಟ್ ಆಟಗಾರ್ತಿಯರು ಸೇರಿದ್ದಾರೆ. ಈ ಹಿಂದೆ 2021ರಲ್ಲಿ ಶಿಖರ್ ಧವನ್ ಈ ಪ್ರಶಸ್ತಿಯನ್ನು ಪಡೆದಿದ್ದರು. ಅರ್ಜುನ ಪ್ರಶಸ್ತಿ ಪಡೆದ ಮೊದಲ ಕ್ರಿಕೆಟಿಗ ಸಲೀಂ ದುರಾನಿ. ಅವರನ್ನು 1961 ರಲ್ಲಿ ಗೌರವಿಸಲಾಯಿತು.

ಈ ವರ್ಷದ ಏಕದಿನ ವಿಶ್ವಕಪ್‌ನಲ್ಲಿ ಶಮಿ ಅದ್ಭುತ ಪ್ರದರ್ಶನ ನೀಡಿದ್ದರು. ಗರಿಷ್ಠ 24 ವಿಕೆಟ್ ಪಡೆದು ಟೀಂ ಇಂಡಿಯಾವನ್ನು ಫೈನಲ್ ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಸೋತಿತು, ಆದರೆ ತಂಡದ ಪ್ರದರ್ಶನವನ್ನು ಹೆಚ್ಚು ಪ್ರಶಂಸಿಸಲಾಯಿತು. ಆರಂಭಿಕ ಪಂದ್ಯಗಳಲ್ಲಿ ಶಮಿಗೆ ಆಡುವ ಅವಕಾಶ ಸಿಗಲಿಲ್ಲ. ಹಾರ್ದಿಕ್ ಪಾಂಡ್ಯ ಗಾಯಗೊಂಡ ನಂತರ ತಂಡದ ಸಂಯೋಜನೆಯಲ್ಲಿ ಬದಲಾವಣೆಯಾಗಿದ್ದು, ಶಮಿ ಸ್ಥಾನ ಪಡೆದರು. ಅದರ ನಂತರ ಅವರು ಉತ್ತಮ ಪ್ರದರ್ಶನ ನೀಡಿ ತಂಡವನ್ನು ಫೈನಲ್‌ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು.

 

Advertisement

Advertisement

Udayavani is now on Telegram. Click here to join our channel and stay updated with the latest news.

Next