ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ ಬಳಿಕ ಟೀಮ್ ಇಂಡಿಯಾ ಐಸಿಸಿ ರ‍್ಯಾಂಕಿಂಗ್ ನಲ್ಲಿ ನಂ.1 ಪಟ್ಟಕ್ಕೇರಿದೆ. ಟಿ-20 ಯಲ್ಲೂ ಮೊದಲ ಸ್ಥಾನದಲ್ಲಿರುವ ಟೀಮ್, ಇದೀಗ ಮತ್ತೊಂದು ವಿಚಾರದಲ್ಲಿ ಕ್ರಿಕೆಟ್ ಪ್ರೇಮಿಗಳ ಮನ ಗೆದ್ದಿದೆ.
ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ಸರಣಿಯಲ್ಲಿ ಮಿಂಚಿದ ಹೈದರಾಬಾದ್ ಎಕ್ಸ್ ಪ್ರೆಸ್ ಮೊಹಮ್ಮದ್ ಸಿರಾಜ್ ನಂ.1 ಏಕದಿನ ಬೌಲರ್ ಆಗಿ ಹೊರಹೊಮ್ಮಿದ್ದಾರೆ.
ಕಳೆದ ಕೆಲ ಸಮಯದಿಂದ ಟೀಮ್ ಇಂಡಿಯಾದಲ್ಲಿ ಉತ್ತಮವಾಗಿ ಬೌಲ್ ಮಾಡುತ್ತಿರುವ ಸಿರಾಜ್, ಇತ್ತೀಚೆಗೆ ನಡೆದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಶ್ರೇಷ್ಠಮಟ್ಟದಲ್ಲಿ ಬೌಲ್ ಮಾಡಿದ್ದರು. ಮೊದಲ ಪಂದ್ಯದಲ್ಲಿ 2 ವಿಕೆಟ್, ದ್ವಿತೀಯ ಪಂದ್ಯದಲ್ಲಿ 3 ವಿಕೆಟ್ ಪಡೆದು , ಅಂತಿಮ ಏಕದಿನ ಪಂದ್ಯದಲ್ಲಿ 4 ಮಹತ್ವದ ವಿಕೆಟ್ ಗಳನ್ನು ಪಡೆದುಕೊಂಡಿದ್ದರು.
ಇದಲ್ಲದೇ ಮಂಗಳವಾರವಷ್ಟೇ ಮುಕ್ತಾಯ ಕಂಡ ಕಿವೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಮೊದಲ ಏಕದಿನ ಪಂದ್ಯದಲ್ಲಿ 4 ವಿಕೆಟ್ ಹಾಗೂ 2ನೇ ಏಕದಿನ ಪಂದ್ಯದಲ್ಲಿ 1 ವಿಕೆಟ್ ಪಡೆದುಕೊಂಡಿದ್ದರು.
Related Articles
ಈ ಅದ್ಭುತ ಪ್ರದರ್ಶನದಿಂದ ಸಿರಾಜ್ ಐಸಿಸಿ ಬೌಲಿಂಗ್ ರ‍್ಯಾಂಕಿಂಗ್ ನಲ್ಲಿ ನಂ.1 ಪಟ್ಟಕ್ಕೇರಿದ್ದಾರೆ. ಇದಕ್ಕೂ ಮೊದಲು ಆಸ್ಟ್ರೇಲಿಯಾದ ವೇಗಿ 727 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರು. ಟ್ರೆಂಟ್ ಬೌಲ್ಟ್ 708 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.