ಭೋಪಾಲ್: ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ಪ್ರಮಾಣ ವಚನ ಬೋಧಿಸಿದರು.
ಇದೇ ವೇಳೆ ಇಬ್ಬರು ಉಪಮುಖ್ಯಮಂತ್ರಿಗಳಾದ ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ಕೂಡ ಪ್ರಮಾಣ ವಚನ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.
ಕಳೆದ ತಿಂಗಳ ಚುನಾವಣೆಯಲ್ಲಿ ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಮೋಹನ್ ಯಾದವ್ ಅವರು ಮಧ್ಯಪ್ರದೇಶದ ಹಿಂದಿನ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿದ್ದರು.
ಪ್ರಮಾಣ ವಚನಕ್ಕೂ ಮೊದಲು ಮೋಹನ್ ಯಾದವ್ ಅವರು ಭೋಪಾಲ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು ಆ ಬಳಿಕ ಬಿಜೆಪಿ ಕಚೇರಿಗೆ ತೆರಳಿ ಜನಸಂಘದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ಮತ್ತು ಬಿಜೆಪಿಯ ಸಂಸ್ಥಾಪಕ ವಿಚಾರವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಗೌರವ ನಮನ ಸಲ್ಲಿಸಿದರು.