Advertisement
ತಾಲೂಕಿನ ಹಾನಗಲ್ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮವನ್ನು ಗ್ರಾಮೀಣ ಭಾಗದ ಜನತೆಗೆ ವೀಕ್ಷಿಸಲು ಎಲ್‌ಇಡಿ ಟಿವಿಗಳನ್ನು ಅಳವಡಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಾಜಿ ಸಚಿವರಾದ ಡಿ.ಕೆ.ಶಿವಕುಮಾರ್ ರವರು ತಮ್ಮ ರಾಜಕೀಯ ಚಾಣಾಕ್ಷತನವನ್ನು ಜನರ ಮುಂದಿಟ್ಟಿದ್ದಾರೆ. ಕಾಂಗ್ರೇಸ್ ನ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ರವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ತಕ್ಷಣವೇ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಬವರ್ಧನೆಗೆ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ. ರಾಜ್ಯದಲ್ಲಿ ಆಡಳಿತ ಬಿಜೆಪಿ ಧೋರಣೆ ಖಂಡಿಸಲು ಮತ್ತು ಅವರ ಕಾರ್ಯ ವೈಖರಿ ಪ್ರಶ್ನಿಸಲು ಸಿದ್ಧರಾಗಬೇಕಾಗಿದೆ ಎಂದರು.
Advertisement
ಕಾಂಗ್ರೆಸ್ ಬಲವರ್ಧನೆಗೆ ಶ್ರಮ: ತಿಪ್ಪೇಸ್ವಾಮಿ
11:32 AM Jun 06, 2020 | Naveen |
Advertisement
Udayavani is now on Telegram. Click here to join our channel and stay updated with the latest news.