Advertisement

ಮೊಳಕಾಲ್ಮೂರು: 2,009 ವಿದ್ಯಾರ್ಥಿಗಳು ಹಾಜರ್‌

01:10 PM Jun 26, 2020 | Naveen |

ಮೊಳಕಾಲ್ಮೂರು: ತಾಲೂಕಿನಲ್ಲಿ ಶಿಕ್ಷಣ ಇಲಾಖೆಯ ವಿಶೇಷ ವ್ಯವಸ್ಥೆಯೊಂದಿಗೆ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಇಂಗ್ಲಿಷ್‌ ಪರೀಕ್ಷೆಯನ್ನು ಶಾಂತಿಯುತವಾಗಿ ನಡೆಸಲಾಯಿತು.

Advertisement

ಮೊಳಕಾಲ್ಮೂರು ಪಟ್ಟಣದ ಸರ್ಕಾರಿ ಪಪೂ ಕಾಲೇಜು , ದುರ್ಗಾ ಪ್ರೌಢಶಾಲೆ, ತಾಲೂಕಿನ ಕೊಂಡ್ಲಹಳ್ಳಿಯ ಗ್ರಾಮಾಂತರ ಪ್ರೌಢಶಾಲೆ, ಹಾನಗಲ್‌ನ ನುಂಕೇಮಲೆ ಸಿದ್ದೇಶ್ವರಸ್ವಾಮಿ ಪ್ರೌಢಶಾಲೆ, ದೇವಸಮುದ್ರದ ಸರ್ಕಾರಿ ಪ್ರೌಢಶಾಲೆ, ರಾಂಪುರದ ಎಸ್‌.ಪಿ.ಎಸ್‌. ಆರ್‌ ಪಪೂ ಮತ್ತು ಎಸ್‌.ಎಲ್‌.ಎನ್‌. ಪ್ರೌಢಶಾಲೆ ಹಾಗೂ ಹೆಚ್ಚುವರಿ ಕೇಂದ್ರವಾಗಿ ಕೊಂಡ್ಲಹಳ್ಳಿ ಶಾಲೆಗಳ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ 2,100 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.

ಅವರಲ್ಲಿ 91 ವಿದ್ಯಾರ್ಥಿಗಳು ಗೈರಾಗಿದ್ದರೆ, 2,009 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪರೀಕ್ಷೆಗೆ ಹೊರರಾಜ್ಯದ 28 ವಿದ್ಯಾರ್ಥಿಗಳು ನೋಂದಾಯಿಸಿ ಕೊಂಡಿದ್ದರು. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಹೊರ ರಾಜ್ಯದಿಂದ ಬಂದ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕ ಕೊಠಡಿಯ ಸೌಲಭ್ಯ ಕಲ್ಪಿಸಲಾಗಿತ್ತು. ಹೊರ ಜಿಲ್ಲೆಗಳಿಂದ ಬಂದ 31 ವಲಸೆ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಪರೀಕ್ಷೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮಾಡಿಸಿ ಮಾಸ್ಕ್ ವಿತರಿಸಲಾಯಿತು. ಸಾಮಾಜಿಕ ಅಂತರ ಕಾಪಾಡಲು ಅಂತರದ ಬಾಕ್ಸ್‌ಗಳನ್ನು ಹಾಕಲಾಗಿತ್ತು. ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಅನಾರೋಗ್ಯಕ್ಕೀಡಾದವರನ್ನು ಆಸ್ಪತ್ರೆಗೆ ಕಳುಹಿಸಲು ವಿಶೇಷ ತುರ್ತು ವಾಹನ ಸೌಲಭ್ಯ ಒದಗಿಸಲಾಗಿತ್ತು.

ಶಿಕ್ಷಕರ ಶಿಕ್ಷಣದ ಮಹಾವಿದ್ಯಾಲಯದ ಸಹನಿರ್ದೇಶಕ ರುದ್ರಪ್ಪ, ಪ್ರವಾಚಕ ತಿಪ್ಪೇಶಪ್ಪ, ತಹಶೀಲ್ದಾರ್‌ ಎಂ.ಬಸವರಾಜ್‌, ತಾಪಂ ಇಒ ಪ್ರಕಾಶ್‌ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next