ಚಿತ್ರದುರ್ಗ: ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಮೊಳಕಾಲ್ಮೂರಿನ ತಹಶಿಲ್ದಾರ್ ಅವರನ್ನು ವಶಕ್ಕೆ ಪಡೆದ ಘಟನೆ ಸೋಮವಾರ ನಡೆದಿದೆ.
ತಹಶೀಲ್ದಾರ್ ಮಲ್ಲಿಕಾರ್ಜುನ ಹಾಗೂ ಆರ್ ಐ ಉಮೇಶ್ ಇಬ್ಬರನ್ನು ಎಸಿಬಿ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಮಣ್ಣು ಸರಬರಾಜು ಮಾಡುವ ಕುರಿತು ಅನುಮತಿಗಾಗಿ ಮೊಳಕಾಲ್ಮೂರು ತಹಶಿಲ್ದಾರ್ ಮಲ್ಲಿಕಾರ್ಜುನ ಅವರು ಪಿಎನ್ ಸಿ ಕಂಪನಿಯ ಪ್ರೀತಂ ಅವರಲ್ಲಿ 2ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು, ಈ ಕುರಿತು ಪ್ರೀತಂ ಅವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದರು.
ಇದನ್ನೂ ಓದಿ:ಮಹದಾಯಿ ವಿಚಾರದಲ್ಲಿ ಕರ್ನಾಟಕ ತಪ್ಪು ಮಾಡಿದ್ದು ಸಾಬೀತುಪಡಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ
ಇದರ ಹಿನ್ನೆಲೆಯಲ್ಲಿ ಎಸಿಬಿ ಇನ್ಸ್ ಪೆಕ್ಟರ್ ಚೈತನ್ಯ ಅವರ ನೇತೃತ್ವದಲ್ಲಿ ಹಾಗೂ ಎಸಿಬಿ ಎಸ್ಪಿ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ತಹಶಿಲ್ದಾರ್ ಕಚೇರಿ ಮೇಲೆ ದಾಳಿ ನಡೆಸಿ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆದಿದ್ದಾರೆ.
ಎಸಿಬಿ ಅಧಿಕಾರಿಗಳು ತಹಶಿಲ್ದಾರ್ ಮಲ್ಲಿಕಾರ್ಜುನ್ , RI ಉಮೇಶನನ್ನ ವಿಚಾರಣೆ ನಡೆಸುತ್ತಿದ್ದಾರೆ.