Advertisement

ಫೆ.8ರಿಂದ ವಾಲ್ಮೀಕಿ ಜಾತ್ರೋ ತ್ಸವ

04:21 PM Jan 12, 2020 | Naveen |

ಮೊಳಕಾಲ್ಮೂರು: ರಾಜ್ಯದಲ್ಲಿ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ, ಐತಿಹಾಸಿಕ ಪರಂಪರೆ ಹೊಂದಿರುವ ವಾಲ್ಮೀಕಿ, ನಾಯಕ ಸಮುದಾಯವು ಪಕ್ಷಾತೀತವಾಗಿ ಸಂಘಟಿತರಾಗಬೇಕು ಎಂದು ರಾಜನಹಳ್ಳಿಯ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಕರೆ ನೀಡಿದರು.

Advertisement

ಪಟ್ಟಣದ ಹೊರವಲಯದಲ್ಲಿರುವ ವಾಲ್ಮೀಕಿ ಸಮುದಾಯ ಭವನದಲ್ಲಿ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ ಮಹರ್ಷಿ ವಾಲ್ಮೀಕಿ ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಾಯಕ ಸಮುದಾಯದ ಆದಿಕವಿ ಮಹರ್ಷಿ ವಾಲ್ಮೀಕಿ ಮಹರ್ಷಿಯವರು ನಾಯಕ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಮಹತ್ತರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಸಮಾಜದಲ್ಲಿ ಅತ್ಯಂತ ಹಿಂದುಳಿದ ಹೆಚ್ಚು ಜನಸಂಖ್ಯೆಯಲ್ಲಿ ನಾಲ್ಕನೇ ಸ್ಥಾನ ಹೊಂದಿರುವ ನಾಯಕ ಜನಾಂಗವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ,ಧಾರ್ಮಿಕವಾಗಿ ಅಭಿವೃದ್ಧಿ ಹೊಂದಿ ಮುಖ್ಯವಾಹಿನಿಗೆ ಬರಬೇಕಾಗಿದೆ. ನಾಯಕ ಸಮುದಾಯದ ಏಳ್ಗೆಗಾಗಿ ಲಿಂಗೈಕ್ಯ ಪುಣ್ಯಾನಂದಪುರಿ ಸ್ವಾಮೀಜಿಯವರೂ ಸಹ ಶ್ರಮಿಸಿರುವುದರಿಂದ ಪುಣ್ಯಾನಂದಪುರಿ ಸ್ವಾಮೀಜಿಯವರ ಪುಣ್ಯಾರಾಧನೆಯ ವಾಲ್ಮೀಕಿ ಜಾತ್ರೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯಾದ್ಯಂತವಿರುವ ನಾಯಕ ಸಮುದಾಯವು ತಪ್ಪದೇ ಫೆ.8 ಮತ್ತು 9 ರಂದು ನಡೆಯುವ ಜಾತ್ರೋತ್ಸವಕ್ಕೆ ಆಗಮಿಸಬೇಕಾಗಿದೆ ಎಂದರು.

ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆಯಲ್ಲಿರುವ ನಾಯಕ ಸಮುದಾಯದ ಅಭಿವೃದ್ಧಿಗಾಗಿ ಶೇ.7.5ರಷ್ಟು ಮೀಸಲಾತಿ ಹೆಚ್ಚಿಸಲು ಸಂಘಟಿತರಾಗಬೇಕಾಗಿದೆ. ರಾಜ್ಯದಲ್ಲಿ ಬೇರೆ ಜನಾಂಗದವರು ನಾಯಕ ಸಮುದಾಯದ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು
ಸೌಲಭ್ಯಗಳಿಂದ ವಂಚಿಸುವ ಬಗ್ಗೆ ಅರಿತು ತಡೆಯಬೇಕಾಗಿದೆ. ಈ ರಾಜ್ಯದ ನಾಯಕ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟ 30 ಕೋಟಿ ರೂ. ಅನುದಾನದಲ್ಲಿ ಕೇವಲ
11 ಕೋಟಿ ರೂ. ಮಾತ್ರ ಖರ್ಚು ಮಾಡಿ ಉಳಿದ 19 ಕೋಟಿ ರೂ. ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗಿದೆ. ಹಾಗಾಗಿ ಈ ನಾಯಕ ಸಮುದಾಯದ ಪ್ರಗತಿಗಾಗಿ ಮಂಜೂರಾದ ಅನುದಾನ ಸದ್ಬಳಕೆ ಮಾಡಿಕೊಳ್ಳಲು ಪ್ರತ್ಯೇಕ ಸಚಿವಾಲಯ ಆರಂಭಿಸಬೇಕಾಗಿದೆ. ಹಂಪಿ ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಹೆಸರನ್ನು ನಾಮಕರಣ ಮಾಡಬೇಕಾಗಿದೆ. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಬಳಿಯಲ್ಲಿಯೇ ಮಹರ್ಷಿ ವಾಲ್ಮೀಕಿಯವರ ಮಂದಿರವನ್ನು ನಿರ್ಮಾಣ ಮಾಡಬೇಕಾಗಿದೆ.

ವಾಲ್ಮೀಕಿ ಯವರ ಜಾತ್ರೋತ್ಸವದಲ್ಲಿ ನಾಯಕ ಸಮುದಾಯದ ಪರಂಪರೆಯನ್ನು
ಜನಾಂಗದವರಲ್ಲಿ ಜಾಗೃತಿ ಮೂಡಿಸಿ ಜಲ್ವಂತ ಸಮಸ್ಯೆಗಳನ್ನು ನಿವಾರಿಸಬೇಕಾಗಿದೆ. ರಾಜ್ಯದಲ್ಲಿ ಸುಮಾರು 60 ಲಕ್ಷ ಜನಸಂಖ್ಯೆ ಹೊಂದಿರುವ ನಾಯಕ ಸಮುದಾಯಕ್ಕೆ
ಹಲವಾರು ಬೇಡಿಕೆ ಈಡೇರಿಸಬೇಕಾಗಿದೆ ಎಂದರು.

ತಾಪಂ ಸದಸ್ಯ ಎಸ್‌.ತಿಪ್ಪೇಸ್ವಾಮಿ, ಮಾಜಿ ಸದಸ್ಯ ಕಲ್ಲೇಶ್‌, ತಾಲೂಕು ಅಧ್ಯಕ್ಷ
ಕೆ.ಜಗಲೂರಯ್ಯ, ಮುಖಂಡರಾದ ವಿ.ಮಾರನಾಯಕ, ವೈ.ಡಿ.ಬಸವರಾಜ್‌, ಗೋವಿಂದಪ್ಪ, ಪರಮೇಶ್ವರಪ್ಪ, ಬಿ.ಸತ್ಯನಾರಾಯಣ, ವೀರೇಂದ್ರಸಿಂಹ, ಎಸ್‌.ಇ. ದೇವಯ್ಯ, ಗುರುರಾಜ್‌,
ರಾಮದಾಸ್‌, ಭಕ್ತ ಪ್ರಹ್ಲಾದ, ಸಂಜೀವ, ಮಂಜುನಾಥ, ಪಾಪೇಶ್‌, ಪಾಲಯ್ಯ, ಟೈಲರ್‌ ತಿಪ್ಪೇಸ್ವಾಮಿ, ನಾಯಕ ಸಮುದಾಯದ ಮುಖಂಡರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next