Advertisement
ಮಾಲಿವುಡ್ ನಲ್ಲಿ ಮಾತ್ರವಲ್ಲದೆ, ತೆಲುಗು ಭಾಷೆಯಲ್ಲೂ ಡಬ್ ಆಗಿ ರಿಲೀಸ್ ಆಗಿರುವ ಸರ್ವೈವಲ್ ಥ್ರಿಲ್ಲರ್ ‘ಮಂಜುಮ್ಮೆಲ್ ಬಾಯ್ಸ್’ಬಾಕ್ಸ್ ಆಫೀಸ್ ನಲ್ಲಿ 200 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಥಿಯೇಟರ್ ನಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡ ಈ ಸಿನಿಮಾ ಇದೀಗ ಓಟಿಟಿಗೆ ಕಾಲಿಡಲು ಸಿದ್ದವಾಗಿದೆ.
Related Articles
Advertisement
ಚಿದಂಬರಂ ಎಸ್. ಪೊದುವಾಳ್ ನಿರ್ದೇಶನದ ಈ ಸಿನಿಮಾದಲ್ಲಿ ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಎಸ್. ಪೊದುವಾಲ್, ಲಾಲ್ ಜೂನಿಯರ್, ದೀಪಕ್ ಪರಂಬೋಲ್, ಅಭಿರಾಮ್ ರಾಧಾಕೃಷ್ಣನ್ ಮತ್ತು ಅರುಣ್ ಕುರಿಯನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.