Advertisement

Asian Games: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ನೂರನೇ ಪದಕ: ಮಹತ್ವದ ಸಾಧನೆ ಎಂದ ಪ್ರಧಾನಿ

09:16 AM Oct 07, 2023 | |

ನವದೆಹಲಿ: ಏಷ್ಯನ್ ಗೇಮ್ಸ್ 2023 ರಲ್ಲಿ ಐತಿಹಾಸಿಕ 100 ಪದಕಗಳನ್ನು ಗೆದ್ದ ಭಾರತದ ಪ್ರದರ್ಶನವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಶ್ಲಾಘಿಸಿದ್ದಾರೆ.

Advertisement

ಭಾರತಕ್ಕೆ ಪ್ರಶಸ್ತಿ ತಂದುಕೊಟ್ಟ ಅಥ್ಲೀಟ್‌ಗಳನ್ನು ಅಭಿನಂದಿಸಿದ ಪ್ರಧಾನಿ ಮೋದಿ, ಕ್ರೀಡಾಕೂಟದಲ್ಲಿ ಅವರ ಪ್ರದರ್ಶನ ವಿಸ್ಮಯಕಾರಿ ಎಂದು ಹೇಳಿದರು.

ಈ ಕುರಿತು ಟ್ವೀಟರ್ ‘X’ ನಲ್ಲಿ ಟ್ವೀಟ್ ಮಾಡಿದ ಪ್ರಧಾನಿ “ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮಹತ್ವದ ಸಾಧನೆ! ನಾವು 100 ಪದಕ ಗೆಲ್ಲುವ ಮೂಲಕ ಗಮನಾರ್ಹ ಮೈಲಿಗಲ್ಲನ್ನು ತಲುಪಿದ್ದು ಭಾರತದ ಜನ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಭಾರತಕ್ಕೆ ಈ ಐತಿಹಾಸಿಕ ಮೈಲಿಗಲ್ಲಿಗೆ ಕಾರಣವಾದ ನಮ್ಮ ಅದ್ಭುತ ಕ್ರೀಡಾಪಟುಗಳಿಗೆ ನಾನು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ,” ಎಂದು ಟ್ವೀಟ್ ಮಾಡಿದ್ದಾರೆ.

ಅಕ್ಟೋಬರ್ 10 ರಂದು ಏಷ್ಯನ್ ಗೇಮ್ಸ್ ತಂಡದ ಕ್ರೀಡಾಪಟುಗಳನ್ನು ಮಾತನಾಡಲು ಎದುರು ನೋಡುತ್ತಿದ್ದೇನೆ, ಅಲ್ಲಿ ಅವರು ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲಿದ್ದೇನೆ ಎಂದು ಪ್ರಧಾನಿ ಹೇಳಿದರು.

Advertisement

ಶುಕ್ರವಾರವಷ್ಟೇ ಏಷ್ಯನ್ ಗೇಮ್ಸ್ ನಲ್ಲಿ ಶತಕದ ಗಡಿಯಲ್ಲಿದ್ದ ಭಾರತ ತಂಡ ಆರ್ಚರಿ ಮತ್ತು ಮಹಿಳಾ ಕಬಡ್ಡಿಯಲ್ಲಿ ಮೂರು ಬ್ಯಾಕ್ ಟು ಬ್ಯಾಕ್ ಚಿನ್ನದ ಪದಕಗಳನ್ನು ಗೆದ್ದು ದೇಶದ ಪದಕಗಳ ಸಂಖ್ಯೆಯನ್ನು 100 ಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಯಿತು.

ಭಾರತವು ಏಷ್ಯನ್ ಗೇಮ್ಸ್ ನಲ್ಲಿ 25 ಚಿನ್ನ, 35 ಬೆಳ್ಳಿ ಮತ್ತು 40 ಕಂಚು ಸೇರಿದಂತೆ 100 ಪದಕಗಳನ್ನು ಗೆಲ್ಲುವ ಮೂಲಕ 100 ಪದಕಗಳ ಐತಿಹಾಸಿಕ ದಾಖಲೆಯನ್ನು ಮಾಡಿದೆ.

ಇದನ್ನೂ ಓದಿ: Asian Games 2023: ಕಬಡ್ಡಿಯಲ್ಲಿ ಚಿನ್ನ: 100ನೇ ಪದಕಕ್ಕೆ ಮುತ್ತಿಕ್ಕಿ ಇತಿಹಾಸ ಬರೆದ ಭಾರತ

Advertisement

Udayavani is now on Telegram. Click here to join our channel and stay updated with the latest news.

Next