ನವದೆಹಲಿ: ಜನವರಿ 2022ರಲ್ಲಿ ಹಣದುಬ್ಬರ ದರ ಏರಿಕೆಯಾಗುವ ಸಾಧ್ಯತೆಗಳು ಇವೆ. ಆದರೆ, ಇದರಿಂದ ಜನಸಾಮಾನ್ಯರಿಗೇನೂ ತೊಂದರೆಯಾಗದು ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಇದನ್ನೂ ಓದಿ:ಶಿವಮೊಗ್ಗ: ಕೋರ್ಟ್ ಆದೇಶ ಮೀರಿ ಹಿಜಾಬ್ ಧರಿಸಿ ಶಾಲೆಗೆ ಬಂದ ವಿದ್ಯಾರ್ಥಿನಿಯರು!
ಸೋಮವಾರ ವಿತ್ತ ಸಚಿವೆ ನಿರ್ಮಲಾ ಸೀತಾ ರಾಮನ್‌ರನ್ನು ಭೇಟಿಯಾಗಿ ಮಾತನಾಡಿದ ಅವರು, ಹಣದುಬ್ಬರವನ್ನು ನಿರೀಕ್ಷೆ ಮಾಡುವ ಕ್ರಮ ಮತ್ತು ವ್ಯವಸ್ಥೆ ಸರಿಯಾಗಿಯೇ ಇದೆ ಎಂದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಕಚ್ಚಾ ತೈಲ ಬೆಲೆಯನ್ನೂ ಗಮನದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದರ ಜತೆಗೆ ಮುಂದಿನ ದಿನಗಳಲ್ಲಿ ಹಣದುಬ್ಬರ ಪ್ರಮಾಣ ಇಳಿಕೆಯ ಹಾದಿ ಹಿಡಿಯಲಿದೆ ಎಂದಿದ್ದಾರೆ.
“ಕ್ರಿಪ್ಟೋ ಕರೆನ್ಸಿ ಜಾರಿ ಚರ್ಚೆ ಪ್ರಗತಿಯಲ್ಲಿ’: ಡಿಜಿಟಲ್ ಕರೆನ್ಸಿಯ ಬಗ್ಗೆ ಆರ್‌ಬಿಐ ಜತೆಗೆ ಕೇಂದ್ರ ಸರ್ಕಾರ ಚರ್ಚೆಯಲ್ಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಅದನ್ನು ಜಾರಿಗೊಳಿಸುವ ಬಗ್ಗೆ ಮಾತುಕತೆಗಳು ಮಕ್ತಾಯ ವಾದ ಬಳಿಕ ತೀರ್ಮಾನಿಸಲಾಗುತ್ತದೆ ಎಂದರು.
ಈ ವಿಚಾರದಲ್ಲಿ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನಿಲುವುಗಳು ಒಂದೇ ಆಗಿವೆ ಎಂದು ಹೇಳಿದ್ದಾರೆ. ಕ್ರಿಪ್ಟೋ ಕರೆನ್ಸಿಯ ಬಗ್ಗೆಯೂ ಇದೇ ನಿಲುವು ಹೊಂದಲಾಗಿದೆ ಎಂದು ವಿತ್ತ ಸಚಿವರು ಹೇಳಿದ್ದಾರೆ.