Advertisement

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

07:52 AM Sep 13, 2021 | Team Udayavani |

ಮೇಷ: ಹೆಚ್ಚಿದ ಪರಿಶ್ರಮ ಹಠಮಾಡದೇ ತಾಳ್ಮೆಯಿಂದಕಾರ್ಯ ಪ್ರವೃತ ¤ರಾಗಿ ದೂರದ ವ್ಯವಹಾರಗಳಿಂದ ಹೆಚ್ಚಿದ ವರಮಾನ. ಗುರುಹಿರಿಯರ ಮೇಲಧಿಕಾರಿಗಳ ಮಾರ್ಗದರ್ಶನ ಪಾಲಿಸುವುದರಿಂದ ಯಶಸ್ಸು ಲಭಿಸೀತು.ಗೃಹದಲ್ಲಿನೆಮ್ಮದಿಯವಾತಾವರಣ.

Advertisement

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಉದಾರತೆ ತೋರುವುದರಿಂದ ಜನಮನ್ನಣೆ. ನಿರೀಕ್ಷಿತ ಸ್ಥಾನ ಸುಖ ಯಶಸ್ಸು ಲಭಿಸಿದ ಮನಃತೃಪ್ತಿ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ದೀರ್ಘ‌ ಪ್ರಯಾಣಸಂಭವ.

ಮಿಥುನ: ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ. ದಂಪತಿಗಳು ಪಾಲುದಾರರು ಪರಸ್ಪರ ಪ್ರೋತ್ಸಾಹಿಸಿ ಕಾರ್ಯ ಸಾಧಿಸಿಕೊಳ್ಳಿ. ನಿರೀಕ್ಷಿತ ಧನಾಗಮ. ಧಾರ್ಮಿಕಕಾರ್ಯಗಳಿಗೆ ಧನವ್ಯಯ.

ಕರ್ಕ: ಉತ್ತಮ ಸ್ಥಾನಮಾನಕ್ಕಾಗಿ ಪ್ರಯತ್ನ. ಅಧ್ಯಯನದಲ್ಲಿ ತತ್ಪರತೆ. ಕುಟುಂಬಿಕರಲ್ಲಿ ತಾಳ್ಮೆ ಸಹನೆಯಿಂದ ವರ್ತಿಸಿ. ಪರಕಾರ್ಯದಲ್ಲಿ ಆಸಕ್ತಿ. ಹಣಕಾಸಿನ ವಿಚಾರದಲ್ಲಿ ಕೃಪಣತೆ ಮಾಡದಿರಿ. ಸಾಂಸಾರಿಕ ಸುಖಮಧ್ಯಮ.

ಸಿಂಹ: ಹಿರಿಯರಿಂದ ಸಂತೋಷ. ಗೃಹವಾಹನಾದಿ ವಿಚಾರಗಳಲ್ಲಿ ಮುನ್ನಡೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಆತುರದನಿರ್ಣಯದಿಂದನಷ್ಟ ಸಂಭವ.

Advertisement

ಕನ್ಯಾ: ಧೈರ್ಯ ಸಾಹಸ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ ಹಾಗೂ ವರಮಾನ. ದೂರದ ಮಿತ್ರರ ಭೇಟಿ.ಕೆಲಸಕಾರ್ಯಗಳಲ್ಲಿ ಗೌರವ ಪ್ರಾಪ್ತಿ. ಸಾಂಸಾರಿಕ ಸುಖತೃಪ್ತಿದಾಯಕ.

ತುಲಾ: ಹಠಮಾರಿತನ ಸಲ್ಲದು. ಸುಮ್ಮನೆ ನಿಷ್ಠುರಕ್ಕೆ ಕಾರಣವಾಗದಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ನಿರೀಕ್ಷಿತ ಗುರಿ ಸಾಧಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಪ್ರಗತಿ.ಆಸ್ತಿವಿಚಾರದಲ್ಲಿಹೆಚ್ಚು ಪರಿಶ್ರಮಅಗತ್ಯ.

ವೃಶ್ಚಿಕ: ಆರೋಗ್ಯ ವೃದ್ಧಿ. ಹೆಚ್ಚಿದ ಸ್ಥಾನ ಮಾನ ಗೌರವ. ಬಂಧುಮಿತ್ರರ ಸಹಕಾರ. ಕೈತುಂಬಾ ಉದ್ಯೋಗ ವ್ಯವಹಾರ ಸಂಭವ. ಸಾಂಸಾರಿಕ ಸುಖ ವೃದ್ಧಿ. ಗುರುಹಿರಿಯರ ಉತ್ತಮ ಸಹಾಯ ಮಾರ್ಗದರ್ಶನಪ್ರಾಪ್ತಿ.

ಧನು: ಉದ್ಯೋಗ ವವಹಾರಗಳಲ್ಲಿ ಉತ್ತಮ ಬದಲಾವಣೆ ಸಂಭವ. ದೀರ್ಘ‌ ಪ್ರಯಾಣದಿಂದ ಲಾಭ. ನೂತನ ಮಿತ್ರರ ಸಮಾಗಮ. ಆಸ್ತಿ ಭೂಮಿ ಕಟ್ಟಡ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕ ಸುಖಮಧ್ಯಮ.

ಮಕರ: ಮಕ್ಕಳಿಂದಹೆಚ್ಚಿದಸಂತೋಷ.ಬಹುಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ಅನಿರೀಕ್ಷಿತ ಧನಾಗಮ ಹಾಗೂ ಹೆಚ್ಚಿದ ಉಳಿತಾಯ.

ಕುಂಭ: ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಪ್ರಗತಿ. ಧನಾರ್ಜನೆ ಉತ್ತಮ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಅವಕಾಶ. ಗೌರವಾದಿ ಪ್ರಾಪ್ತಿ. ದಾಂಪತ್ಯ ತೃಪ್ತಿದಾಯಕ.

ಮೀನ: ಗೃಹೋಪ ವಸ್ತುಗಳ ಸಂಗ್ರಹ. ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದಲೂಉತ್ತಮ ಸಹಕಾರ ಸಂಭವ.ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ.

Advertisement

Udayavani is now on Telegram. Click here to join our channel and stay updated with the latest news.

Next