ಬೆಂಗಳೂರು: ರಾಜ್ಯ ವಿಧಾನಸಭೆ ಅಧಿವೇಶನ ಸೋಮವಾರದಿಂದ ಮೂರು ದಿನಗಳ ಕಾಲ ನಡೆಸುವ ಬಗ್ಗೆ ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದಾರೆ.
Advertisement
ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಪ್ರಾರಂಭವಾಗಲಿದ್ದು ಎರಡು ದಿನ ಸದಸ್ಯರ ಪ್ರಮಾಣ ವಚನ ನಡೆಯಲಿದೆ.
ಬುಧವಾರ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು ಆ ನಂತರ ಮುಂದೂಡಿಕೆಯಾಗಲಿದೆ. ಕಾಂಗ್ರೆಸ್ ಸರ್ಕಾರ ಹೊಸದಾಗಿ ಬಜೆಟ್ ಮಂಡಿಸುವುದರಿಂದ ಮತ್ತೆ ಜೂನ್ ತಿಂಗಳ ಅಂತ್ಯ ಅಥವಾ ಜುಲೈ ಮೊದಲ ವಾರದಲ್ಲಿ ಅಧಿವೇಶನ ನಡೆಸುವ ಸಾಧ್ಯತೆಯಿದೆ.