Advertisement

ಹಣದಿಂದ ವೈದ್ಯರ ಸೇವೆ ಅಳೆಯಲು ಸಾಧ್ಯವಿಲ್ಲ: ಸುಧಾಕರ್‌

09:24 PM Jul 01, 2022 | Team Udayavani |

ಬೆಂಗಳೂರು: ವೈದ್ಯಕೀಯ ವೃತ್ತಿ ಅತ್ಯಂತ ಪುಣ್ಯದ ಕೆಲಸವಾಗಿದ್ದು, ಅದೃಷ್ಟವಂತರಿಗೆ ಮಾತ್ರ ಅವಕಾಶ ಸಿಗುತ್ತದೆ. ಇಂತಹ ವೃತ್ತಿಯನ್ನು ಸಮರ್ಪಣಾ ಮನೋಭಾವದಿಂದ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

Advertisement

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯರ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಕ್ರವಾರ ಮಾತನಾಡಿದ ಅವರು, ಹಣದಿಂದ ವೈದ್ಯರ ಸೇವೆಯನ್ನು ಅಳೆಯಲು ಸಾಧ್ಯವಿಲ್ಲ. ವೈದ್ಯರು ವೃತ್ತಿಪರರಾಗಿದ್ದಾಗ ಸಮಾಜ ಅವರನ್ನು ಗುರುತಿಸಿ ಗೌರವಿಸುತ್ತದೆ. ವೈದ್ಯರು ಕೇವಲ ಔಷಧಿ ಮಾತ್ರ ಕೊಡುವುದಿಲ್ಲ, ಬದಲಾಗಿ ರೋಗಿಯನ್ನು ಅಂತಃಕರಣದಿಂದ ಆರೈಕೆ ಮಾಡುತ್ತಾರೆ ಎಂದು ತಿಳಿಸಿದರು.

ಶಿಕ್ಷಣ ಅನ್ನುವಂತಹದ್ದು ವೈದ್ಯರಿಗೆ ತುಂಬಾ ಅನಿವಾರ್ಯ. ಪ್ರತಿದಿನದ ಕಲಿಕೆ ಅವರಿಗೆ ತುಂಬಾ ಮಹತ್ವದ್ದು. ಹೀಗಾಗಿ ವೈದ್ಯರು ನಿರಂತರ ಅಧ್ಯಯನ ಮಾಡಿದರೆ ಮಾತ್ರ ಹೊಸತನಕ್ಕೆ ಹೊಂದಿಕೊಳ್ಳಲು ಸಾಧ್ಯ. ರಾಜ್ಯದಲ್ಲಿ ವೈದ್ಯರ ಕೊರತೆ ಇಲ್ಲ. ಆದರೆ ಇಲಾಖೆಯಲ್ಲಿ ಕೆಲ ವೈದ್ಯರಿಂದ ಹಾಜಾರಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರುವ ಹಾಗಾಗಿದೆ. ವೈದ್ಯರ ಮೇಲೆ ಯಾರೂ ನಿಗಾ ಇಡಬಾರದು. ವೈದ್ಯರನ್ನು ಯಾರೂ ಅನುಮಾನದಿಂದ ನೋಡಬಾರದು. ಇದರಿಂದ ವೃತ್ತಿಗೆ ಅಪಮಾನವಾಗುತ್ತದೆ. ಹೀಗಾಗಿ ಎಲ್ಲರೂ ಸಮರ್ಪಣೆ ಮಾಡಿಕೊಂಡು ವೃತ್ತಿ ಮಾಡಬೇಕೆಂದು ಮನವಿ ಮಾಡಿದರು.

ಕೋವಿಡ್‌ ಬಳಿಕ 10 ವರ್ಷದಲ್ಲಿನ ಆಗುವಂತಹ ಬೆಳವಣಿಗೆ ಒಂದು ವರ್ಷದಲ್ಲಿ ಆಗಿದೆ. 2020ಕ್ಕೆ ಹೋಲಿಸಿದರೆ ಈಗ 4,000 ವೈದ್ಯರು ಹೆಚ್ಚಾಗಿ ಕೆಲಸ ಮಾಡುತ್ತಿದ್ದಾರೆ. ಸರಕಾರ ವೈದ್ಯರ ನೇಮಕಾತಿ ಹಾಗೂ ಮೂಲಭೂತ ಸೌಕರ್ಯ, ಸೌಲಭ್ಯಗನ್ನು ಹೆಚ್ಚು ಮಾಡುತ್ತಿದೆ. ಆಸ್ಪತ್ರೆಗಳು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಪ್ರತಿ ಜಿಲ್ಲೆ ಯಲ್ಲೂ ವೈದ್ಯಕೀಯ ಕಾಲೇಜು ಆರಂಭವಾಗಬೇಕು. ಆದರೆ ಅದಕ್ಕೂ ಮೊದಲು ಗುಣಮಟ್ಟದಲ್ಲಿ ಬದಲಾವಣೆ ತರಬೇಕು. ವೈದ್ಯರ ಮೇಲೆ ಯಾರೇ ಹಲ್ಲೆ ಮಾಡಿದರೂ ಅದು ಅಕ್ಷಮ್ಯ ಅಪರಾಧ. ವೈದ್ಯರ ಮೇಲೆ ಹಲ್ಲೆ ಮಾಡಿದರೆ ಕಾನೂನು ಕ್ರಮ ಕೂಗೊಳ್ಳುತ್ತೇವೆ ಎಂದು ತಿಳಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next