Advertisement

Sandeshkhali ಗದ್ದಲದ ನಡುವೆ ಶೇಖ್ ಷಹಜಹಾನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ

09:52 AM Feb 23, 2024 | Team Udayavani |

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಭೂಹಗರಣದ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕ ಶೇಖ್ ಷಹಜಹಾನ್ ವಿರುದ್ಧ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ದಾಖಲಿಸಿದೆ.

Advertisement

ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಶೇಖ್ ಷಹಜಹಾನ್ ಮನೆ ಸೇರಿದಂತೆ ಶೇಖ್ ಷಹಜಹಾನ್ ಜತೆ ನಂಟು ಹೊಂದಿರುವ ಪಶ್ಚಿಮ ಬಂಗಾಳದ ಉದ್ಯಮಿಯೊಬ್ಬರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.

ಸಂದೇಶ್‌ಖಾಲಿಯಲ್ಲಿರುವ ಮಹಿಳೆಯರು ಶೇಖ್ ಷಹಜಹಾನ್ ಭೂಹಗರಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಜೊತೆಗೆ ಮಹಿಳೆಯರನ್ನು ಬೆದರಿಸುವ ಮೂಲಕ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಆತನ ಬಂಧನಕ್ಕೆ ಆಗ್ರಹಿಸಿ ಸಂದೇಶಖಾಲಿಯಲ್ಲಿ ಬೃಹತ್ ಪ್ರತಿಭಟನೆ ಕೂಡ ನಡೆಯುತ್ತಿದೆ.

ಜನವರಿ 5 ರಂದು ಪಡಿತರ ಹಗರಣಕ್ಕೆ ಸಂಬಂಧಿಸಿದಂತೆ ಶಾಜಹಾನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಹೋದ ವೇಳೆ ತನಿಖಾಧಿಕಾರಿಗಳ ಮೇಲೆ ಗುಂಪು ದಾಳಿ ನಡೆಸಿತ್ತು ಆ ಬಳಿಕ ಶಾಜಹಾನ್ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: ವಾರಣಾಸಿಯ ಹೆದ್ದಾರಿ ಪರಿಶೀಲಿಸಿದ ಪ್ರಧಾನಿ… ಇಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next