ನವದೆಹಲಿ: ಭಾರತದ ಪ್ರತಿಷ್ಟಿತ ವಿಮಾನಯಾನ ಸಂಸ್ಥೆಗಳಲ್ಲಿ ಒಂದಾಗಿರುವ ಜೆಟ್ ಏರ್‌ವೇಸ್‌ಗೆ ಸಂಬಂಧಿಸಿದ ಸುಮಾರು 538 ಕೋಟಿ ರೂ.ಗಳ ಆಸ್ತಿಯನ್ನು ಇ.ಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದ ಸಂಬಂಧ ಜೆಟ್ ಏರ್‌ವೇಸ್‌ಗೆ ಸೇರಿದ ಹಲವು ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ಧಾರೆ.
ಜೆಟ್ ಏರ್‌ವೇಸ್‌ನ ಮುಖ್ಯಸ್ಥ ನರೇಶ್ ಗೋಯಲ್, ಪತ್ನಿ ಅನಿತಾ ಗೋಯಲ್, ಪುತ್ರ ನಿವಾನ್ ಗೋಯಲ್ ಹಾಗೂ ಸಂಬಂಧಿಕರು, ಸ್ನೇಹಿತರ ಹೆಸರಿನಲ್ಲಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ. ಭಾರತ, ದುಬೈ, ಲಂಡನ್ ಹೀಗೆ ವಿಶ್ವದ ನಾನಾ ಭಾಗಗಳಲ್ಲಿರುವ 17 ಫ್ಲಾಟ್‌ಗಳು, ಬಂಗಲೆಗಳು, ವಾಣಿಜ್ಯ ಕಟ್ಟಡಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಕೇಂದ್ರ ತನಿಖಾ ಸಂಸ್ಥೆ ಜೆಟ್ ಏರ್‌ವೇಸ್‌ಗೆ ಸಂಬಂಧಿಸಿದ ಕನಿಷ್ಠ 538 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಅಕ್ರಮ ಹಣ ವರ್ಗಾವಣೆ ಕಾಯ್ದೆ (PMLA) ಅಡಿಯಲ್ಲಿ ಜಪ್ತಿ ಮಾಡಿದೆ.
ಜಪ್ತಿ ಮಾಡಿರುವ ಕೆಲ ಆಸ್ತಿಗಳ ಪೈಕಿ ಕೆಲವೊಂದನ್ನು ಜೆಟೈರ್ ಪ್ರೈವೇಟ್ ಲಿಮಿಟೆಡ್, ಜೆಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಎಂಬ ಹೆಸರಿನಲ್ಲೂ ರಿಜಿಸ್ಟರ್ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: CCB: ನೆರೆ ರಾಜ್ಯದಿಂದ ಮಹಿಳೆಯರ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ 14 ಮಂದಿ ಸೆರೆ