ಮುಂಬಯಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬಯಿನ ವಿಶೇಷ ರಜಾಕಾಲದ ಕೋರ್ಟ್ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ(ನವೆಂಬರ್ 06) ಆದೇಶ ನೀಡಿದೆ.
ಇದನ್ನೂ ಓದಿ:ಆನೇಕಲ್: ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು 7 ಜನರಿಗೆ ಗಾಯ
ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ್ ಮುಖ್ ಅವರನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಇನ್ನೂ ಒಂಬತ್ತು ದಿನಗಳ ಕಾಲ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಿಕೊಂಡಿತ್ತು. ಆದರೆ ಕೋರ್ಟ್ ಜಾರಿ ನಿರ್ದೇಶನಾಲಯದ ಮನವಿಯನ್ನು ತಿರಸ್ಕರಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ(ನವೆಂಬರ್ 01) ಜಾರಿ ನಿರ್ದೇಶನಾಲಯ ದೇಶ್ ಮುಖ್ ಅವರನ್ನು ಸುಮಾರು 12 ಗಂಟೆಗಳ ಕಾಲ ವಿಚಾರಣೆಗೊಳಪಡಿಸಿದ ನಂತರ ಬಂಧಿಸಿತ್ತು. ಮಂಗಳವಾರ ವಿಶೇಷ ಕೋರ್ಟ್ ದೇಶ್ ಮುಖ್ ಅವರನ್ನು ನವೆಂಬರ್ 6ರವರೆಗೆ ಇ.ಡಿ. ವಶಕ್ಕೆ ಒಪ್ಪಿಸಿ ಆದೇಶ ನೀಡಿತ್ತು.
ಪೊಲೀಸ್ ಇಲಾಖೆಯಲ್ಲಿ ದೇಶ್ ಮುಖ್ ನೂರು ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ಮುಂಬಯಿ ಮಾಜಿ ಪೊಲೀಸ್ ಕಮಿಷನರ್ ಪರಂ ಬೀರ್ ಸಿಂಗ್ ಆರೋಪಿಸಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ಭ್ರಷ್ಟಾಚಾರದ ಪ್ರಕರಣ ದಾಖಲಿಸಿತ್ತು.