ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದ್ದು, ಜಿಲ್ಲಾಡಳಿತ ಜಿಲ್ಲೆಯಾದ್ಯಂತ 42 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.
ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್ ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ತಿಳಿಸಿದ್ದಾರೆ.
ಇದರಲ್ಲಿ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.40 ಕೋಟಿ, ಉಳಿದಂತೆ ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ ಮಾಡುವಲ್ಲಿ ನಿರತವಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
Related Articles
ಇದಲ್ಲದೇ ಅಕ್ರಮ ಮಧ್ಯ ಹಾಗೂ ಕೆಲವು ವಸ್ತುಗಳ ನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.