Advertisement

ಹಣ ಹಂಚಿಕೆ ವಿಚಾರವನ್ನ ಸಾರ್ವಜನಿಕಗೊಳಿಸಬಾರದು: ಸಲೀಂ ಅಹ್ಮದ್

11:37 AM Dec 15, 2021 | Team Udayavani |

ಬೆಳಗಾವಿ : ಪರಿಷತ್ ಚುನಾವಣೆಯಲ್ಲಿ ಹಣದ ಹೊಳೆ ಹರಿದಿಲ್ಲ, ಹಣ ಹಂಚಿಕೆ ವಿಚಾರವನ್ನ ಸಾರ್ವಜನಿಕಗೊಳಿಸಬಾರದು ಎಂದು ನೂತನವಾಗಿ ಆಯ್ಕೆಯಾಗಿರುವ ಧಾರವಾಡ ಡಾ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯ ಸಲೀಂ ಅಹ್ಮದ್ ಬುಧವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಗೆಲುವು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಗೆಲುವಾಗಿದೆ ಎಂದರು.

ಈ ಸರ್ಕಾರ ಪಂಚಾಯತ್ ಗಳಿಗೆ ಅನುದಾನ ನೀಡುತ್ತಿಲ್ಲ, ನರೇಗಾ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಬೆಳಗಾವಿಯ ಸುವರ್ಣ ಸೌಧದಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾಗಿರುವ ಸಲೀಂ ಅಹಮದ್, ಚನ್ನರಾಜ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.‌ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್.‌ ಪಾಟೀಲ್, ಹಿರಿಯ ಮುಖಂಡರಾದ ರಮೇಶ್ ಕುಮಾರ್, ಎಚ್.ಕೆ. ಪಾಟೀಲ್, ಡಾ. ಜಿ. ಪರಮೇಶ್ವರ, ಸಿ.ಎಂ. ಇಬ್ರಾಹಿಂ, ಬಿ.ಕೆ. ಹರಿಪ್ರಸಾದ್ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next