Advertisement
ಪ್ರಕರಣ ಸಂಬಂಧ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ ಮುಖ್ಯ ಹಣಕಾಸು ಅಧಿಕಾರಿ ಡಾ| ವೀರನ ಗೌಡ ಪಾಟೀಲ್, ಉಪ ಹಣಕಾಸು ಅಧಿಕಾರಿ ಪ್ರಶಾಂತ್ ಮಾಡಾಳ್, ಹಣಕಾಸು ಅಧೀಕ್ಷಕ ಶಂಕರಾಚಾರಿ ಅವ ರನ್ನು ಅಮಾನತುಗೊಳಿಸಿ ಆದೇಶ ಹೊರ ಡಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ, ಪ್ರಕರಣವನ್ನು ಸಿಐಡಿಗೆ ವಹಿಸಿದೆ.ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ 55 ಕೋಟಿ ರೂ.ಗಳನ್ನು ಮಂಗಳೂರಿನ ಗೋಕುಲ ನಗರದ ನವನಿಧಿ ಕಾಂಪ್ಲೆಕ್ಸ್‌ನಲ್ಲಿರುವ ಕುಳಾಯಿ ಶಾಖೆಯ ಇಂಡಿಯನ್ ಓವರ್‌ಸೀಸ್ ಬ್ಯಾಂಕಿನಲ್ಲಿ ನಿಗದಿತ ಠೇವಣಿ ಇರಿಸಿರುವ ಹಣ ದುರುಪಯೋಗವಾಗಿರುವುದು ಮೇಲ್ನೋಟಕ್ಕೆ ನಿಜ ಎಂದು ಕಂಡು ಬಂದಿ ರುವ ಹಿನ್ನೆಲೆಯಲ್ಲಿ ಈ ಮೂರು ಮಂದಿ ಅಧಿಕಾರಿಗಳನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ವಿವಿಧ ಬ್ಯಾಂಕ್‌ಗಳಲ್ಲಿ ಹೂಡಿಕೆ ಮಾಡಿರುವ ನಿಗದಿತ ಠೇವಣಿ ಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ವರದಿ ಸಲ್ಲಿಸಲು ಗ್ರಾಮೀಣಾಭಿವೃದ್ಧಿ- ಪಂಚಾಯತ್‌ರಾಜ್ ಇಲಾಖೆಯ ಪ್ರಧಾನಕಾರ್ಯದರ್ಶಿ ಡಾ| ನಾಗಾಂಬಿಕಾದೇವಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ರಚಿಸಲು ಆದೇಶಿ ಸಲಾಗಿದೆ.