Advertisement

ಶಿಕ್ಷಣ ಸಾಲಕ್ಕೆ ಏಕಗವಾಕ್ಷಿ ವ್ಯವಸ್ಥೆ

10:25 PM Apr 07, 2019 | Team Udayavani |

ನವದೆಹಲಿ: ನಾವು ಅಧಿಕಾರಕ್ಕೆ ಬಂದರೆ ಶಿಕ್ಷಣ ಸಾಲ ಪಡೆಯುವ ಪ್ರಕ್ರಿಯೆಯನ್ನು ಇನ್ನಷ್ಟು ಸುಲಭಗೊಳಿಸಲಿದ್ದು, ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲಿದ್ದೇವೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

Advertisement

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌, 1ನೇ ತರಗತಿಯಿಂದ 12ನೇ ತರಗತಿಯವರೆಗೆ ಎಲ್ಲರಿಗೂ ಉಚಿತ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ ಒದಗಿಸಲಿದ್ದೇವೆ ಎಂದಿದ್ದಾರೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಸ್ವಾಯತ್ತೆಯನ್ನು ಮರುಸ್ಥಾಪಿಸುತ್ತೇವೆ ಮತ್ತು ದೇಶದ ಹಿಂದುಳಿದ ಭಾಗಗಳಲ್ಲಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುತ್ತೇವೆ.

ಇದು ರಾಜ್ಯಗಳ ವ್ಯಾಪ್ತಿಯಲ್ಲಿರಲಿದೆ ಎಂದಿದ್ದಾರೆ. ಅಷ್ಟೇ ಅಲ್ಲ, ವಿದ್ಯಾರ್ಥಿಗಳ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಪಟ್ಟಿ ಮಾಡುವ ವಿದ್ಯಾರ್ಥಿಗಳ ಹಕ್ಕು ಕಾನೂನು ಜಾರಿಗೆ ತರಲಿದ್ದೇವೆ ಎಂದೂ ಹೇಳಿದ್ದಾರೆ. ಶಿಕ್ಷಣವು ವಿದ್ಯಾರ್ಥಿಯನ್ನು ಸಬಲಗೊಳಿಸುತ್ತದೆ. ಹೀಗಾಗಿ ಪ್ರತಿ ವಿದ್ಯಾರ್ಥಿಗೂ ಶಿಕ್ಷಣ ಲಭ್ಯವಾಗಬೇಕು ಎಂದು ರಾಹುಲ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next