Advertisement
ಕೇರಳದ ಮಾನಂದವಾಡಿ ತಾಲೂಕಿನ ಆಸ್ಪತ್ರೆಯಲ್ಲಿ ಮತ್ತು ಕೋಜಿಕ್ಕೋಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸುರೇಶ್ ಮತ್ತು ಸುರೇಶಯ್ಯ ಎಂಬುವರು ತಿಮ್ಮನ ಹೊಸಳ್ಳಿ ಹಾಡಿಗೆ ವಿಶ್ರಾಂತಿಗಾಗಿ ಬಂದಿ ದ್ದರು. ಜ್ವರ ತೀವ್ರವಾಗಿ, ಸ್ಥಳೀಯ ಆಸ್ಪತ್ರೆಗೆ ದಾಖಲಾದರಾದರೂ, ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ. ಇವರಿಂದ ಪಡೆದ ರಕ್ತಪರೀಕ್ಷೆಯ ವರದಿ ಬಂದಿದ್ದು, ಮಂಗನಕಾಯಿಲೆ ಇರುವ ಲಕ್ಷಣಗಳು ಕಂಡು ಬಂದಿವೆ. ಹಾಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ತಿಮ್ಮನಹೊಸಳ್ಳಿ ಹಾಡಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಕಾಡಿನಲ್ಲಿರುವ ಉಣ್ಣೆಗಳನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬಾಗಲಕೋಟೆ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹರಡುತ್ತಿರುವ ಮಂಗನ ಕಾಯಿಲೆ ಹತೋಟಿಗೆ ಆರೋಗ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಈ ಕಾಯಿಲೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ಯೋಜನೆ ಹಾಕಿ ಕೊಂಡಿದ್ದು, ಪ್ರಸಕ್ತ ಬಜೆಟ್‌ನಲ್ಲಿ 10 ಕೋಟಿ ರೂ.ಅನುದಾನ ನೀಡಲು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1957ರ ಬಳಿಕ ಮಂಗನ ಕಾಯಿಲೆ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ. ಈ ಕಾಯಿಲೆ ಹರಡದಂತೆ ಮುಂಚಿತವಾಗಿಯೇ ಎಚ್ಚರಿಕೆ ವಹಿಸುವ ಜವಾಬ್ದಾರಿ ಆಯಾ ಗ್ರಾಮ ಪಂಚಾಯಿತಿ ಮತ್ತು ಅರಣ್ಯ ಇಲಾಖೆಯದ್ದು. ಮಂಗನ ಕಾಯಿಲೆಯನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ಹೊಸ ಪ್ರಯೋಗಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಈಗಾಗಲೇ ಎರಡು ಬಾರಿ ಔಷಧ ವಿತರಣೆ ಅಭಿಯಾನ ನಡೆಸಲಾಗಿದೆ. ಇನ್ನೊಂದು ಬಾರಿ ನಡೆಸಲಾಗುವುದುಎಂದು ಹೇಳಿದರು.
Related Articles
– ಶಿವಾನಂದ ಪಾಟೀಲ, ಆರೋಗ್ಯ ಸಚಿವ.
Advertisement
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಗಳಿಗೆ ವೈಯಕ್ತಿಕವಾಗಿ 50 ಸಾವಿರ ರೂ.ನೀಡಲಾಗುತ್ತಿದೆ.ಕಾಯಿಲೆ ನಿಯಂತ್ರಣಕ್ಕೂ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ.
– ಡಿ.ಸಿ.ತಮ್ಮಣ್ಣ , ಸಾರಿಗೆ ಸಚಿವ.