Advertisement

ಮಂಕಿ ಪಾಕ್ಸ್ ಹೆಚ್ಚಳ: ನಾಳೆ ಸಿಎಂ ಬೊಮ್ಮಾಯಿ ಸಭೆ

12:30 PM Aug 01, 2022 | Team Udayavani |

ಬೆಂಗಳೂರು: ರಾಜ್ಯಾದ್ಯಂತ ಮಂಕಿ ಪಾಕ್ಸ್ ಪ್ರಕರಣಗಳು ಅಲ್ಲಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಮಂಗಳವಾರ ಮಹತ್ವದ ಸಭೆ ನಡೆಯಲಿದೆ.

Advertisement

ಆರೋಗ್ಯ ಅಧಿಕಾರಿಗಳು, ಸಚಿವ ಡಾ.ಕೆ.ಸುಧಾಕರ್, ಎಲ್ಲ ಜಿಲ್ಲಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಂಕಿಪಾಕ್ಸ್ ಪ್ರಕರಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಿ ಅಗತ್ಯ ವೈದಕೀಯ ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರಕರಣ ಬೇಧಿಸಲು ಜನರ ಸಹಕಾರ ಅತ್ಯಗತ್ಯ: ಡಿಜಿಪಿ ಪ್ರವೀಣ್ ಸೂದ್

ಇದರ ಜತೆಗೆ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದೆ. ‌ಕೆಲವೆಡೆ ಹಾನಿಯಾಗಿದೆ. ಈ ಬಗ್ಗೆಯೂ ಸಭೆ ನಡೆಸುತ್ತೇವೆ. ಇಂದು ನಾನು‌‌ ಕೊಪ್ಪಳ ಜಿಲ್ಲಾ ಪ್ರವಾಸ ನಡೆಸುತ್ತೇನೆ. ಅಂಜನಾದ್ರಿ ಬೆಟ್ಟಕ್ಕೆ ಈಗಾಗಲೇ ನೂರು ಕೋಟಿ ರೂ. ಅನುದಾನ ನೀಡಲಾಗಿದ್ದು, ಭೂ ಸ್ವಾಧೀನ ಪ್ರಕ್ರಿಯೆಯ ಪ್ರಗತಿ ವಿಚಾರಿಸುತ್ತೇನೆ. ಸದ್ಯದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next