ಮಂಗಳೂರು: ಮಂಕಿ ಪಾಕ್ಸ್ ಹಿನ್ನೆಲೆಯಲ್ಲಿ ಹೊರದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ವಿಮಾನಗಳು ಲ್ಯಾಂಡ್ ಆಗುವ ಮೊದಲೇ ಅದರಲ್ಲಿ ಜ್ವರ, ಚರ್ಮದ ಮೇಲೆ ಗುಳ್ಳೆಗಳಿರುವ ಪ್ರಯಾಣಿಕರನ್ನು ಪತ್ತೆ ಮಾಡಿ ಅವರನ್ನು ಪ್ರತ್ಯೇಕಿಸಿ, ವಿಮಾನ ನಿಲ್ದಾಣದಲ್ಲಿರುವ ಆರೋಗ್ಯಾಧಿಕಾರಿಗಳಿಂದ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.
ಅವರು ಮಂಗಳವಾರ ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.
ವಿಮಾನ ಲ್ಯಾಂಡ್ ಆದ ಮೇಲೆ ಪ್ರಯಾಣಿಕರನ್ನು ಮೇಲ್ವಿಚಾರಣೆ ಮಾಡುವ ಸಿಬಂದಿ ಜ್ವರ ಹಾಗೂ ಚರ್ಮದ ಗುಳ್ಳೆಯ ಬಗ್ಗೆ ಪ್ರಯಾ ಣಿಕರಿಂದ ಖಚಿತ ಪಡಿಸಿಕೊಳ್ಳಬೇಕು. ರೋಗ ಲಕ್ಷಣಗಳಿರುವ ಪ್ರಯಾಣಿಕ ರನ್ನು (ಸಂಶಯಾಸ್ಪದ) ಪ್ರತ್ಯೇಕಿಸಿ ವೆನಾÉಕ್‌ನ ಐಸೋಲೇಶನ್ ವಾರ್ಡ್‌ಗೆ ದಾಖಲಿಸ ಬೇಕು ಎಂದರು.
ಸೋಂಕಿನ ಬಗ್ಗೆ ಕನ್ನಡ, ಮಲಯಾಳ, ಹಿಂದಿ, ಇಂಗ್ಲಿಷ್ ಭಾಷೆಗಳಲ್ಲಿ ಜಾಗೃತಿ ಮೂಡಿಸು ವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಂಕಿಪಾಕ್ಸ್ ಜಾಗೃತಿ ಮೂಡಿಸುವ ವಿವಿಧ ಫೋಟೋಗಳನ್ನು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿ ಹಾಗೂ ಸಿಬಂದಿಯ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ ಹಂಚಿಕೊಳ್ಳುವಂತೆ ನಿಲ್ದಾಣದ ಆರೋಗ್ಯಾಧಿಕಾರಿ ಹಾಗೂ ಏರ್‌ಲೈನ್ಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಮಂಕಿಪಾಕ್ಸ್ ಬಗ್ಗೆ ಕ್ಯಾಬ್ ಚಾಲಕರಿಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಅರಿವು ಮೂಡಿಸಬೇಕು. ವಿಮಾನ ನಿಲ್ದಾಣದ ಡಿಜಿಟಲ್ ಡಿಸ್‌ಪ್ಲೇಯಲ್ಲಿ ಹಾಗೂ ಮೈಕ್ ಮೂಲಕ ಅರಿವು ಮೂಡಿಸಬೇಕು. ಜನರು ಕೂಡ ಜಿಲ್ಲಾಡಳಿತದೊಂದಿಗೆ ಕೈಜೋಡಿಸ ಬೇಕು ಎಂದು ಕೋರಿದರು.
ಪ್ರಭಾರ ಡಿಎಚ್‌ಒ ಡಾ| ರಾಜೇಶ್ ಬಿ.ವಿ., ಕೋವಿಡ್ ನೋಡಲ್ ಅಧಿಕಾರಿ ಡಾ| ಅಶೋಕ್ ಎಚ್., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಗದೀಶ್ ಕೆ., ವಿಮಾನ ನಿಲ್ದಾಣದ ಹೆಡ್ ಆಪರೇಷನ್ ಆಫೀಸರ್ ಶ್ರೀಕಾಂತ್ ಟಾಟಾ, ವಿಮಾನ ನಿಲ್ದಾಣದ ವೈದ್ಯಾಧಿ ಕಾರಿ ಡಾ| ನಿಶಿತ ಮೊದಲಾದವರು ಉಪಸ್ಥಿತರಿದ್ದರು.