Advertisement

ಮಂಕಿಪಾಕ್ಸ್ ಸೋಂಕು ಭೀತಿ: ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ನಡೆಸಲು ಸರ್ಕಾರದ ಸೂಚನೆ

10:13 AM Jun 07, 2022 | Team Udayavani |

ಬೆಂಗಳೂರು: ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ, ಕಾಯಿಲೆಯ ಮುನ್ಸೂಚನೆ ಕಂಡ ಕೂಡಲೇ ಸ್ಕ್ರೀನಿಂಗ್, ಎಲ್ಲ ಜಿಲ್ಲೆಗಳಲ್ಲಿ ಆಸ್ಪತ್ರೆ ಬೆಡ್ ಗಳನ್ನು ಕಾಯ್ದಿರಿಸುವುದು, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಸೇರಿದಂತೆ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Advertisement

ಯಾವುದೇ ಶಂಕಿತ ವರದಿಯಾದಾಗ ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ಸಲುವಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ಮೀಸಲಿಡುವಂತೆ ಸೂಚಿಸಲಾಗಿದೆ.

ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ನಡೆಸಲು ಸೂಚಿಸಲಾಗಿದೆ. ಶಂಕಿತ ಪ್ರಕರಣ ವರದಿಯಾದರೆ ಬೆಂಗಳೂರು ಇಂದಿರಾ ನಗರ ಆಸ್ಪತ್ರೆ ಮತ್ತು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Koo App

ವಿಶ್ವದ ಹಲವೆಡೆ ಮಂಕಿಪಾಕ್ಸ್ ಸೋಂಕು ಹರಡುತ್ತಿರುವುದನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ, ಕಾಯಿಲೆಯ ಮುನ್ಸೂಚನೆ ಕಂಡ ಕೂಡಲೇ ಸ್ಕ್ರೀನಿಂಗ್, ಎಲ್ಲ ಜಿಲ್ಲೆಗಳಲ್ಲಿ ಆಸ್ಪತ್ರೆ ಬೆಡ್ ಗಳನ್ನು ಕಾಯ್ದಿರಿಸುವುದು, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್, ಸೇರಿದಂತೆ ಹಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದೇವೆ.

Advertisement

Dr. Sudhakar K (@drsudhakark.official) 6 June 2022

ಇದನ್ನೂ ಓದಿ:ಸೇವಾ ಶುಲ್ಕ ಸಿಂಧುವೇ? ಅಸಿಂಧುವೇ? ಹಾಗಾದರೆ ಏನಿದು ವಿವಾದ?

ರಾಜ್ಯ ಕಣ್ಗಾವಲು ಅಧಿಕಾರಿ ಹಾಗೂ ಯೋಜನಾ ನಿರ್ದೇಶಕರು ಐಡಿಎಸ್ ಪಿ ಡಾ.ಶ್ರೀನಿವಾಸ ರಾವ್ ಅವರನ್ನು ರಾಜ್ಯ ಮಟ್ಟದ ನೋಡಲ್ ಅಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next