Advertisement

ಕೇರಳದಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆ; ದೇಶಾದ್ಯಂತ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆ

02:49 PM Aug 02, 2022 | Team Udayavani |

ನವದೆಹಲಿ: ಮಂಕಿಪಾಕ್ಸ್ ಸೋಂಕಿನ ಲಕ್ಷಣದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆಯ ನಂತರ ಯುಎಇನಿಂದ ಕೇರಳಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರಲ್ಲಿ ಮಂಕಿಪಾಕ್ಸ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ 5ನೇ ಪ್ರಕರಣ ಪತ್ತೆಯಾದಂತಾಗಿದೆ. ಅಲ್ಲದೇ ಭಾರತದಲ್ಲಿ ಈವರೆಗೆ 7 ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ.

Advertisement

ಇದನ್ನೂ ಓದಿ:ಧಾರಾಕಾರ ಮಳೆಗೆ ರೈತರ ಜಮೀನು, ಶಾಲೆಗಳು ಜಾಲವೃತ : ಸೇತುವೆ ಮುಳುಗಡೆಯಾಗಿ ಸಂಚಾರ ಸ್ಥಗಿತ!

ಕೇರಳದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವುದನ್ನು ಆರೋಗ್ಯ ಸಚಿವೆ ವೀಣಾ ಜಾರ್ಜ್ ಖಚಿತಪಡಿಸಿದ್ದಾರೆ ಎಂದು ಎಎನ್ ಐ ವರದಿ ಮಾಡಿದೆ. 30 ವರ್ಷದ ರೋಗಿ ಮಲಪ್ಪುರಂನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಚಿವೆ ಜಾರ್ಜ್ ಮಾಹಿತಿ ನೀಡಿದ್ದಾರೆ.

ಜುಲೈ 27ರಂದು ಯುಎಎಇನಿಂದ ಕೋಝಿಕೋಡ್  ವಿಮಾನನಿಲ್ದಾಣಕ್ಕೆ ಆಗಮಿಸಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದ್ದು, ಈಗ ಮಲಪ್ಪುರಂ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next