ದಾಂಡೇಲಿ : ನಗರ ಸಭೆಯ ಸಭಾಭವನದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆಯವರು ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಮಳೆಗಾಲ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವಭಾವಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಗತ್ಯ ಮಾರ್ಗದರ್ಶನವನ್ನು ಆರ್.ವಿ.ದೇಶಪಾಂಡೆಯವರು ನೀಡಿದರು.
ನಗರ ಸಭೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದ ಅವರು ನಗರದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಬೇಕೆಂದು ಸಲಹೆ ನೀಡಿದರು.
ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಬೇಕೆಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.
Related Articles
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ, ತಹಶೀಲ್ದಾರ್ ಅಶೋಕ್ ಶಿಗ್ಗಾವಿ, ಪೌರಾಯುಕ್ತರಾದ ಆರ್.ಎಸ್.ಪವಾರ್ ಹಾಗೂ ನಗರ ಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.