Advertisement
ನೈಋತ್ಯ ಮುಂಗಾರು ಈ ಬಾರಿ ಜೂ. 4ರ ವೇಳೆಗೆ ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂ. 1ರಂದು ಕೇರಳಕ್ಕೆ ಪ್ರವೇಶವಾಗುತ್ತದೆ. ಇದು ಸುಮಾರು 7 ದಿನ ಏರುಪೇರಾಗುವ ಸಾಧ್ಯತೆಯಿರುತ್ತದೆ. ಆದರೆ ಈ ಬಾರಿ 4 ದಿನಗಳ ಏರುಪೇರಿನೊಂದಿಗೆ ಜೂ. 4ರಂದು ಕೇರಳದಲ್ಲಿ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Related Articles
ಭಾರತವು ಕೃಷಿಯನ್ನೇ ಆಧರಿಸಿರುವ ದೇಶವಾಗಿದ್ದು, ಭಾರತದ ಆರ್ಥಿಕತೆಯು ಮಳೆಯನ್ನು ಅವಲಂಬಿಸಿದೆ. ದೇಶದ ಒಟ್ಟಾರೆ ವಾರ್ಷಿಕ ಮಳೆ ಪ್ರಮಾಣದಲ್ಲಿ ಶೇ. 75ರಷ್ಟನ್ನು ಮುಂಗಾರು ಮಳೆಯೇ ಒಳಗೊಂಡಿದೆ. ಈ ಬಾರಿ ಮುಂಗಾರು ವಿಳಂಬವಾದರೆ ಕೃಷಿ ಚಟುವಟಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆದರೆ ವಿಳಂಬವು ದೊಡ್ಡ ಮಟ್ಟದಲ್ಲಿ ಕೃಷಿ ಚಟುವಟಿಕೆಗಳ ಮೇಲಾಗಲೀ, ದೇಶದ ಒಟ್ಟಾರೆ ಮಳೆಯ ಪ್ರಮಾಣದ ಮೇಲಾಗಲೀ ಪರಿಣಾಮ ಬೀರುವುದಿಲ್ಲ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.
Advertisement