Advertisement

ಕೇರಳಕ್ಕೆ ಇಂದು ಮುಂಗಾರು ಪ್ರವೇಶ

11:42 PM Jun 07, 2019 | Lakshmi GovindaRaj |

ಬೆಂಗಳೂರು: ಇಂದು (ಜೂ.8) ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಪ್ರವೇಶಕ್ಕೆ ಅನುಕೂಲಕರ ವಾತಾವರಣ ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗಿದ್ದು, ಜೂ.9ರಂದು ಕರ್ನಾಟಕದ ಕರಾವಳಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ. ಜತೆಗೆ ಮಾರುತಗಳು ತೀವ್ರತೆ ಹೆಚ್ಚಿಸಿಕೊಂಡು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Advertisement

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದ್ದು, ಇನ್ನೂ ಎರಡು ದಿನ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಪ್ರಮುಖವಾಗಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಸುನೀಲ್‌ ಗವಾಸ್ಕರ್‌ ತಿಳಿಸಿದರು.

ಶುಕ್ರವಾರ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಬಳ್ಳಾರಿ, ಚಾಮರಾನಗರ, ಕೊಡಗು, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿ ಹಲವೆಡೆ ಉತ್ತಮ ಮಳೆಯಾಗಿರುವುದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next