Advertisement

Monsoon in Agumbe: ಆಗುಂಬೆಯಲ್ಲಿ ಒಂದೇ ದಿನ 33 ಸೆಂ.ಮೀ. ಮಳೆ ದಾಖಲು

11:29 PM Jul 16, 2024 | Team Udayavani |

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಂಗಳವಾರ ವ್ಯಾಪಕ ಮಳೆ(Rain)ಯಾಗಿದ್ದು ಕರ್ನಾಟಕದ ಚಿರಾಪುಂಜಿ ಆಗುಂಬೆ (Agumbe)ಯಲ್ಲಿ ಕಳೆದ 24 ಗಂಟೆಯಲ್ಲಿ 33 ಸೆಂ.ಮೀ.ಮಳೆಯಾಗಿದೆ.

Advertisement

ನೈಋತ್ಯ ಮುಂಗಾರು ರಾಜ್ಯಾದ್ಯಂತ ಸಕ್ರಿಯವಾಗಿದ್ದು ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಬರೋಬ್ಬರಿ 33 ಸೆಂ.ಮೀ ಅತ್ಯಧಿಕ ಮಳೆ ದಾಖಲಾಗಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಗಾಳಿಯ ವೇಗವು 30 ರಿಂದ 50 ಕಿ.ಮೀ ವರೆಗೆ ಇದ್ದು ಕರ್ನಾಟಕದ ಕರಾವಳಿಯುದ್ದಕ್ಕೂ ಪ್ರತಿ ಗಂಟೆಗೆ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ಸೂಚಿಸಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಅತೀ ಭಾರೀ ಮತ್ತು ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ಜು.17ರಂದು ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜು.20ರ ವರೆಗೆ ರಾಜ್ಯಾದ್ಯಂತ ಭಾರೀ ಮಳೆ ಮುಂದುವರಿಯುವ ಸಾಧ್ಯತೆಗಳಿವೆ. ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ.

ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳ ಕೆಲವು ಕಡೆ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಜು.20ರವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ವಿಭಾಗದ ನಿರ್ದೇಶಕ ಹಾಗೂ ವಿಜ್ಞಾನಿ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next