Advertisement

Monsoon: ಜೂನ್‌ 2ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ ನಿರೀಕ್ಷೆ

09:16 PM May 30, 2024 | Team Udayavani |

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿಗೆ ಜೂನ್‌ 2ರಂದು ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿದ್ದು ಈ ವರ್ಷ ಉತ್ತಮ ಮುಂಗಾರು ಮಳೆ ನಿರೀಕ್ಷಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Advertisement

ನೈಋತ್ಯ ಮಾನ್ಸೂನ್‌ ಮೇ 30ರಂದು ಕೇರಳ ಪ್ರವೇಶಿಸಿದೆ. ಸಾಮಾನ್ಯವಾಗಿ ನೈಋತ್ಯ ಮುಂಗಾರು ಕೇರಳವನ್ನು ಜೂನ್‌ 1ರಂದು ಪ್ರವೇಶ ಮಾಡುತ್ತಿತ್ತು. ಆದರೆ ಈ ವರ್ಷ 2 ದಿನ ಮೊದಲೇ ಕೇರಳ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಜೂನ್‌ 2ರಂದು ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಗೆ ಮುಂಗಾರು ಪ್ರವೇಶಿರುವ ಹೆಚ್ಚಿನ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

ಮುಂದಿನ 2-3 ದಿನಗಳಲ್ಲಿ ನೈಋತ್ಯ ಮಾನ್ಸೂನ್‌ ಮಧ್ಯ ಅರೇಬಿಯನ್‌ ಸಮುದ್ರದ ಕೆಲವು ಭಾಗಗಳು, ಲಕ್ಷದ್ವೀಪ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡಿನ ಕೆಲವು ಭಾಗಗಳಲ್ಲಿ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗಿವೆ. ಒಂದು ಚಂಡಮಾರುತದ ಪರಿಚಲನೆಯು ದಕ್ಷಿಣ ಕೇರಳದ ಆಗ್ನೇಯ ಅರೇಬಿಯನ್‌ ಸಮುದ್ರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿಮೀ ಎತ್ತರದಲ್ಲಿದೆ ಎಂದು ತಿಳಿದು ಬಂದಿದೆ.

ಇಂದು ಎಲ್ಲೆಲ್ಲಿ ಮಳೆ?:

ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ (30-40 ಕಿಮೀ) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮೇಲ್ಮೈ ಮಾರುತಗಳವರೆಗೆ ಎಲ್ಲ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next