Advertisement

ಜೂ. 10ಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

01:17 AM Jun 06, 2019 | Team Udayavani |

ಬೆಂಗಳೂರು: ಮುಂಗಾರು ಪ್ರವೇಶಕ್ಕೆ ಅಗತ್ಯವಾದ ವಾತಾವರಣ ನಿರ್ಮಾಣವಾಗಿದ್ದು, ಕೇರಳಕ್ಕೆ ಜೂನ್‌ 8 ರಂದು ಮುಂಗಾರು ಪ್ರವೇಶಿಸಲಿದೆ. ಅದರಂತೆ ರಾಜ್ಯಕ್ಕೆ ಎರಡು ದಿನ ತಡವಾಗಿ, ಅಂದರೆ ಜೂ. 10ರೊಳಗೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Advertisement

ಬಂಗಾಳಕೊಲ್ಲಿಯಲ್ಲಿ ಮುಂಗಾರು ಪ್ರವೇಶಕ್ಕೆ ಅಗತ್ಯವಾದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜೂ.8ಕ್ಕೆ ಕೇರಳ ಪ್ರವೇಶಿಸುವ ಸಾಧ್ಯತೆಯಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಕೇಂದ್ರದ ವಿಜ್ಞಾನಿ ಸುನೀಲ್‌ ಗವಾಸ್ಕರ್‌ ಮಾಹಿತಿ ನೀಡಿದರು.

ಕರಾವಳಿ ಭಾಗದಲ್ಲಿರುವ ಮೇಲ್ಮೆ„ಸುಳಿಗಾಳಿ ಹಾಗೂ ದಕ್ಷಿಣ ಒಳನಾಡಿನಲ್ಲಿನ ಟ್ರಫ್ನಿಂದಾಗಿ ರಾಜ್ಯದ ಹಲವೆಡೆಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳು ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next