Advertisement
ಪ್ರಾಕೃತಿಕ ವಿಕೋಪ ಎದುರಿಸುವ ಸಿದ್ಧತೆಗಳ ಕುರಿತಾಗಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜರಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಬೆಳ್ತಂಗಡಿ ತಾ|ನಲ್ಲಿ ನೀರಿನ ಪ್ರವಾಹಕ್ಕೆ ಕಿಂಡಿ ಅಣೆಕಟ್ಟು ಸಹಿತ ಸೇತುವೆಗಳಿಗೆ ಪಕ್ಕದ ಮರದ ದಿಮ್ಮಿಗಳು ಅಡ್ಡ ಬಿದ್ದು ಅಲ್ಲಿನ ಪ್ರದೇಶಗಳು ಜಲಾವೃತವಾಗುತ್ತವೆ. ಹಾಗಾಗಿ ಅರಣ್ಯ ಇಲಾಖೆ ಸೇತುವೆ ಪಕ್ಕದಲ್ಲಿರುವ ಮರವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಭೂಕುಸಿತ ಸಮಸ್ಯೆ
ಶಿರಾಡಿ, ಸಂಪಾಜೆ, ಚಾರ್ಮಾಡಿ ಭಾಗಗಳಲ್ಲಿ ಭೂಕುಸಿತ ಸಂಭವಿಸುವುದರಿಂದ ಅಧಿಕಾರಿಗಳು ಸಿದ್ಧತೆ ಮಾಡಿ ಕೊಂಡಿರಬೇಕು. ನಿರ್ಲಕ್ಷ್ಯದಿಂದ ಅಪಾಯ ಎದುರಾದರೆ ಅಧಿಕಾರಿಗಳೇ ಜವಾಬ್ದಾರಿ ಯಾಗಿರುತ್ತಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಎಚ್ಚರಿಕೆ ನೀಡಿದರು.
Related Articles
ಗ್ರಾಮ ಲೆಕ್ಕಾಧಿಕಾರಿ, ಪಿಡಿಒ, ಕಾರ್ಯದರ್ಶಿಗಳು ಕೇಂದ್ರ ಸ್ಥಾನದಲ್ಲಿದ್ದು, ಅತಿ ವೃಷ್ಠಿ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ಕೊಡಬೇಕು. ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೇಂದ್ರ ತೆರೆಯಲು ಸಮುದಾಯ ಭವನ, ದೊಡ್ಡ ಕಟ್ಟಡಗಳನ್ನು ಗುರುತಿಸಲಾಗಿದೆ. ಜಾನು ವಾರುಗಳಿಗೆ ಗೋಶಾಲೆ ತೆರೆಯಲು ಸೂಕ್ತ ಸ್ಥಳಗಳನ್ನು ಗುರುತಿಸಲಾಗಿದೆ. ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ನ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಕಡಲ ಕಿನಾರೆಗಳಲ್ಲಿ ನಾಮಫಲಕ ಅಳವಡಿಸಿ ಗೃಹ ರಕ್ಷಕ ಸಿಬಂದಿ ನಿಯೋಜಿಸಲಾಗಿದೆ. ಕೃತ ನೆರೆಯುಂಟಾಗುವ ಪ್ರದೇಶ, ನದಿ ತೀರದ ಹಳ್ಳಿಗಳಲ್ಲಿ ತುರ್ತು ಪರಿಸ್ಥಿತಿ ಸಂದರ್ಭ ಜನರ ರಕ್ಷಣೆಗೆ ಬೋಟ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಲೋಕೋಪಯೋಗಿ ಇಲಾಖೆ ಮತ್ತು ಜಿ.ಪಂ. ಎಂಜಿನಿಯರಿಂಗ್ ಇಲಾಖೆಯವರು ಪರಸ್ಪರ ಸಮನ್ವಯದಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ತಿಳಿಸಿದರು.
Advertisement
ತಾಲೂಕುವಾರು ನೋಡಲ್ ಅಧಿಕಾರಿಗಳ ನೇಮಕಹವಾಮಾನ ವೈಪರಿತ್ಯದಿಂದಾಗಿ ದೋಣಿ ಮೂಲಕ ರಕ್ಷಣೆ ಮಾಡಲು ಸಾಧ್ಯವಾಗದೆ ಇದ್ದಲ್ಲಿ ಹೆಲಿಕಾಪ್ಟರ್ ಮೂಲಕ ಜನರನ್ನು ಸ್ಥಳಾಂತರಿಸುವ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿ ಯಿಂದ ಮಾಡಲಾಗುತ್ತದೆ. ನೆರೆಪೀಡಿತ ಹಾಗೂ ತಗ್ಗು ಪ್ರದೇಶಗಳ ಮತ್ತು ಭೂಕುಸಿತ ಉಂಟಾಗುವ ಪ್ರದೇಶಗಳಲ್ಲಿ ತಾಲೂಕುವಾರು ನೋಡಲ್ ಅಧಿಕಾರಿ ಗಳನ್ನು ನೇಮಿಸಲಾಗಿದೆ. ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ. ಸಿಂಧೂ ರೂಪೇಶ್ ಅವರು ತಿಳಿಸಿದರು. ತುರ್ತು ಸಂದರ್ಭ ಜಿಲ್ಲಾ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 1077/ 0824-2442590 ದಿನದ 24 ಗಂಟೆಗಳ ಕಾಲ ಕಾರ್ಯಚರಿಸುತ್ತದೆ. ಜಿಲ್ಲೆಯ ಉಪ ವಿಭಾಗಾಧಿ ಕಾರಿಗಳ ಹಾಗೂ ಎಲ್ಲ ತಹ ಶೀಲ್ದಾರರ ಕಾರ್ಯಾಲಯದಲ್ಲಿ 24 ಗಂಟೆಗಳ ಕಾಲ ಸಿಬಂದಿ ನೇಮಿಸಲಾಗಿದೆ. ಜಿಲ್ಲಾ ಮಟ್ಟದ, ಉಪವಿಭಾಗ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನೊಳಗೊಂಡ ವಾಟ್ಸಪ್ ಗ್ರೂಪ್ ರಚಿಸಲಾಗಿದೆ ಎಂದರು. ಮಂಗಳೂರು ಉತ್ತರ ಶಾಸಕ ಡಾ| ವೈ. ಭರತ್ ಶೆಟ್ಟಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಉಪಮೇಯರ್ ವೇದಾವತಿ ಉಪಸ್ಥಿತರಿದ್ದರು. ನಿರ್ಲಕ್ಷಿಸಿ ದರೆ ಕಠಿನ ಕ್ರಮ
ರಾ.ಹೆ.ಯಲ್ಲಿ ಟ್ರಾಫಿಕ್ ಸಮಸ್ಯೆ, ಗುಡ್ಡ ಕುಸಿತ, ಅಪಾಯಕಾರಿ ಮರ ತೆರವು, ಚರಂಡಿ ಸಮಸ್ಯೆ, ವಿದ್ಯುತ್ ವ್ಯತ್ಯಯ ಮೊದಲಾದವುಗಳ ಬಗ್ಗೆ ಗಮನ ಹರಿಸಬೇಕು. ಗ್ರಾ.ಪಂ ಮಟ್ಟದಲ್ಲಿ ಪಿಡಿಒ, ನೋಡಲ್ ಅಧಿಕಾರಿಗಳೂ ಗಮನ ಹರಿಸಬೇಕು. ಅಧಿಕಾರಿಗಳು ಬೇಜವಾªರಿಯಿಂದ ವರ್ತಿಸಿದರೆ ಅಧಿಕಾರಿಗಳೇ ಹೊಣೆಯಾಗುತ್ತಾರೆ. ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು.
-ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು