Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಈ ತಿಂಗಳ ಅಂತ್ಯದವರೆಗೂ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹಿಂಗಾರು ಸಂದರ್ಭದಲ್ಲಿ ಆಸ್ತಿ-ಪಾಸ್ತಿ ಹಾನಿಯಾಗದಂತೆ, ಮನೆಹಾನಿ ಆದ ಸಂದರ್ಭದಲ್ಲಿ ಸಂತ್ರಸ್ತರನ್ನು ಕಾಳಜಿ ಕೇಂದ್ರ ಅಥವಾ ಇತರ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಅನುಕೂಲವಾಗುವಂತೆ ಎಲ್ಲ ಇಲಾಖೆಯ ಅಧಿಕಾರಿಗಳು ರಕ್ಷಣ ಸಾಮಗ್ರಿಗಳೊಂದಿಗೆ ಸನ್ನದ್ಧರಾಗುವುದರ ಜತೆಗೆ ಅಗತ್ಯವಿರುವ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಮಳೆ ನಿಂತ ಹಿನ್ನೆಲೆ ಚರಂಡಿ, ಕಾಲುವೆ, ತೋಡುಗಳಲ್ಲಿ ಸಿಲುಕಿರುವ ಕಸ, ಕಡ್ಡಿ, ತರಗೆಲೆಗಳನ್ನು ಕೂಡಲೇ ತೆರವುಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾ.ಪಂ. ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಡ್ಯಾಂಗಳ ಗುಣಮಟ್ಟವನ್ನು ಆಗಿಂದಾಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಕಲುಷಿತ ನೀರು ಶುದ್ಧ ಕುಡಿಯುವ ನೀರಿಗೆ ಸೇರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಗುಣಮಟ್ಟ ಪರಿಶೀಲಿಸಿ ಕುಡಿಯಲು ಯೋಗ್ಯವಾಗಿದ್ದಲ್ಲಿ ಮಾತ್ರ ಸೇವನೆಗೆ ಅವಕಾಶ ನೀಡಬೇಕು. ಕಲುಷಿತ ನೀರು ಸೇವನೆಯಿಂದ ಸಾಂಕ್ರಾಮಿಕ ರೋಗಗಳಿಗೆ ತುತ್ತಾಗಿ ಮರಣ ಸಂಭವಿಸುವ ಸಾಧ್ಯತೆ ಇದ್ದು, ಬಾವಿ ಹಾಗೂ ನದಿ ನೀರಿಗೆ ಕೊಳಚೆ ನೀರು ಸೇರದಂತೆ ಸೂಕ್ತ ಕ್ರಮ ವಹಿಸಬೇಕು. ಸಾರ್ವಜನಿಕ ಹಾಗೂ ಸರಕಾರಿ ಬಾವಿಗಳನ್ನು ಸ್ವತ್ಛಗೊಳಿಸಲು ತತ್‌ಕ್ಷಣವೇ ಮುಂದಾಗಬೇಕು ಎಂದರು.
ಅನುದಾನದಲ್ಲಿ ಕೊರತೆ ಇಲ್ಲಜಿಲ್ಲಾ ವಿಪತ್ತು ನಿರ್ವಹಣ ಕ್ರಮಕ್ಕೆ ಈಗಾಗಲೇ ಪಿ.ಡಿ. ಖಾತೆಯಲ್ಲಿ 11.39 ಕೋ.ರೂ. ಅನುದಾನ ಲಭ್ಯವಿದೆ. ಈಗಾಗಲೇ ತಾಲೂಕು ಮಟ್ಟದ ತಹಶೀಲ್ದಾರರ ವಿಪತ್ತು ಪಿ.ಡಿ. ಖಾತೆಯಲ್ಲಿ 165.70 ಲಕ್ಷ ರೂ. ಅನುದಾನ ಲಭ್ಯವಿದ್ದು, ಬರ ನಿರ್ವಹಣೆಗೆ ಸಂಬಂಧಪಟ್ಟಂತೆ ಅನುದಾನದಲ್ಲಿ ಯಾವುದೇ ಕೊರತೆ ಇಲ್ಲ ಎಂದರು. ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಕುಂದಾಪುರ ಸಹಾಯಕ ಕಮಿಷನರ್ ಮಹೇಶ್ಚಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್‌ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.