Advertisement
ನಿಗದಿಯಂತೆ ಬೆಳಗ್ಗೆ 11 ಗಂಟೆಗೆ ಉಭಯ ಸದನಗಳ ಕಲಾಪ ಆರಂಭಗೊಳ್ಳಲಿದ್ದು, ಅರಣ್ಯ ಸಚಿವರಾಗಿದ್ದ ಹಾಗೂ ವಿಧಾನಸಭೆಯ ಹಿರಿಯ ಸದಸ್ಯರಾಗಿದ್ದ ಉಮೇಶ್ ಕತ್ತಿಯವರ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಮೊದಲ ದಿನದ ಕಲಾಪ ಸಂತಾಪಕ್ಕೆ ಸೀಮಿತವಾಗಲಿದೆ.
Related Articles
Advertisement
ಎಸಿಬಿ ಕೆಸರೆರಚಾಟ ಸಾಧ್ಯತೆ:ಸಿದ್ದರಾಮಯ್ಯ ಸರ್ಕಾರದಲ್ಲಿ ಅಸ್ತಿತ್ವಕ್ಕೆ ತರಲಾಗಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ರಚನೆಯನ್ನು ರದ್ದುಪಡಿಸಿ ಹೈಕೋರ್ಟ್ ನೀಡಿರುವ ಆದೇಶ ಕಾಂಗ್ರೆಸ್ ವಿರುದ್ಧ ಬಿಜೆಪಿ ಇನ್ನೊಂದು ಅಸ್ತ್ರ ಸಿಕ್ಕಂತಾಗಿದೆ. ಅಧಿಕಾರಕ್ಕೆ ಬಂದ 48 ಗಂಟೆಗಳಲ್ಲಿ ಎಸಿಬಿ ರದ್ದುಪಡಿಸಿ ಲೋಕಾಯುಕ್ತಕ್ಕೆ ಇನ್ನಷ್ಟು ಬಲ ನೀಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದು ಅನುಷ್ಠಾನಕ್ಕೆ ತರಲು ಬಿಜೆಪಿ ಆಗಿಲ್ಲ. ಹೈಕೋರ್ಟ್ ಎಸಿಬಿಯನ್ನು ರದ್ದುಪಡಿಸಿತು ಎಂಬ ತಿರುಗೇಟು ಕಾಂಗ್ರೆಸ್ ಬಳಿ ಇದೆ. ಒಟ್ಟಿನಲ್ಲಿ ಎಸಿಬಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಕೆಸರೇರಚಾಟ ನಡೆಯುವ ಸಾಧ್ಯತೆಯೂ ಇದೆ. ಜೆಡಿಎಸ್ ನಡೆ ಏನಿರಲಿದೆ:
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ, ಬೆಂಗಳೂರಿನ ಮಳೆ ಅನಾಹುತ, ರಾಜ್ಯದ ಪ್ರವಾಹ ಪರಿಸ್ಥಿತಿ ಇತ್ಯಾದಿ ವಿಷಯಗಳು ಅಧಿವೇಶನದಲ್ಲಿ ಜೆಡಿಎಸ್ ಅಸ್ತ್ರಗಳಾಗಿವೆ. ಎಲ್ಲಾ ವಿಚಾರಗಳನ್ನು ಸದನದಲ್ಲಿ ಮಾತನಾಡುತ್ತೇನೆ ಎಂದು ಇತ್ತಿಚಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ನಡುವೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವಿನ ಕಚ್ಚಾಟಗಳ ಅಷ್ಟೊಂದು ಪ್ರತಿಕ್ರಿಯೆ ನೀಡದ ಕುಮಾರಸ್ವಾಮಿ ಒಂದಿಷ್ಟು ಅಂತರ ಕಾಯ್ದುಕೊಂಡಂತಿದೆ. ಹಾಗಾಗಿ, ಅಧಿವೇಶನದಲ್ಲಿ ಜೆಡಿಎಸ್ ನಡೆ ಹೇಗಿರಲಿದೆ ಎಂದು ಕಾದು ನೋಡಬೇಕಿದೆ. ಸಂಭಾವ್ಯ ಚರ್ಚಾ ವಿಷಯಗಳು
ಪ್ರವಾಹ, ಪಿಎಸ್‌ಐ ನೇಮಕಾತಿ ಹಗರಣ, 40 ಪರ್ಸಂಟ್ ಕಮಿಷನ್, ಉಪನ್ಯಾಸಕರ ನೇಮಕಾತಿ ಹಗರಣ, ರಾಜ್ಯದ ಕಾನೂನು ಸುವ್ಯವಸ್ಥೆ, ಬಿಬಿಎಂಪಿ ಹಾಗೂ ತಾ.ಪಂ. ಜಿ.ಪಂ ಚುನಾವಣೆ, ಲೋಕಾಯುಕ್ತ ಬಲಪಡಿಸುವಿಕೆ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ, ಸಿದ್ದರಾಮೋತ್ಸವ, ಬಿಜೆಪಿಯ ಜನಸ್ಪಂದನಾ ಸಮಾವೇಶ, ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ, ಜೆಡಿಎಸ್‌ನ ಜಲಧಾರೆ, ಸಚಿವ-ಶಾಸಕರ ವಿರುದ್ಧದ ಆರೋಪಗಳು ಏಳು ವಿಧೇಯಕಗಳ ಮಂಡನೆ?
ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳಿಗೆ ಜನಸಂಖ್ಯೆ ನಿಗದಿಗೆ ಸಂಬಂಧಿಸಿದ “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ತಿದ್ದುಪಡಿ) ಆಧ್ಯಾದೇಶ-2022′ ಸೇರಿದಂತೆ ಏಳಕ್ಕೂ ಹೆಚ್ಚು ವಿಧೇಯಕಗಳು ಅಧಿವೇಶನದಲ್ಲಿ ಮಂಡಣೆಯಾಗಲಿವೆ ಎಂದು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.