ಬೆಂಗಳೂರು: ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಜೂನ್ 5ರಿಂದ 16ರವರೆಗೆ ನಡೆಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಸಚಿವ ಸಂಪುಟ ಸಭೆ ನಂತರ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ, ಬಜೆಟ್‌ನ ಮುಂದುವರಿದ ಅಧಿವೇಶನ ಎರಡು ವಾರಗಳ ಕಾಲ ನಡೆಸಲಾಗುವುದು ಎಂದು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ಜೂನ್ ಅಧಿವೇಶನದಲ್ಲಿ ಇಲಾಖಾವಾರು ಚರ್ಚೆಗೆ ಅವಕಾಶ
ಕಲ್ಪಿಸಿಕೊಡಲಾಗುತ್ತಿತ್ತು. ಆದರೆ, ಈ ಬಾರಿ ಅಧಿವೇಶದಲ್ಲಿ ಆ ರೀತಿಯ ಅವಕಾಶ ನೀಡುವುದು ಅನುಮಾನ ಎಂದು ಹೇಳಲಾಗುತ್ತಿದೆ.