Advertisement

ಮುಂಗಾರು ಚುರುಕು; ಇನ್ನೂ 3 ದಿನ ಮಳೆ

12:40 PM Jun 10, 2017 | Team Udayavani |

ಬೆಂಗಳೂರು: ರಾಜ್ಯಾದ್ಯಂತ ನೈರುತ್ಯ ಮುಂಗಾರು ಮಾರುತಗಳು ಚುರುಕಾಗಿದ್ದು, ಮುಂದಿನ ಮೂರ್‍ನಾಲ್ಕು ದಿನಗಳು ಕರಾವಳಿ ಸೇರಿದಂತೆ ಒಳನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. 

Advertisement

ತುಮಕೂರು ಆಸುಪಾಸು ಇದ್ದ ಮುಂಗಾರು ಮಾರುತಗಳು ಶುಕ್ರವಾರ ಚಿತ್ರದುರ್ಗ, ದಾವಣಗೆರೆ, ಗದಗ, ರಾಯಚೂರು, ಬಳ್ಳಾರಿವರೆಗೂ ವ್ಯಾಪಿಸಿವೆ. ಇದರಿಂದ ಇಡೀ ದಿನ ಅಲ್ಲಲ್ಲಿ ಮಳೆಯಾಗಿದೆ. ಶನಿವಾರ ಬಹುತೇಕ ರಾಜ್ಯದ ಎಲ್ಲ ಭಾಗಗಳಿಗೂ ಮಾರುತ ವಿಸ್ತರಿಸಲಿದೆ ಎಂದು ಕರ್ನಾಟಕ ರಾಜ್ಯ ವಿಪತ್ತು ಉಸ್ತುವಾರಿ ಕೇಂದ್ರದ ವಿಜ್ಞಾನಿಗಳು ತಿಳಿಸಿದ್ದಾರೆ. 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಬಿರುಸುಗೊಳ್ಳಲು ಕಾರಣವಾಗಿದೆ. ಹಾಗಾಗಿ, ಮತ್ತಷ್ಟು ಮಳೆ ಸುರಿಯಲಿದೆ. ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ಒಳನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. 

ಈ ಮಧ್ಯೆ ನಗರದಲ್ಲಿ ಶುಕ್ರವಾರ ಸಂಜೆ ಸಾಧಾರಣ ಮಳೆಯಾಗಿದೆ. ಎಂ.ಜಿ. ರಸ್ತೆ, ಮೆಜೆಸ್ಟಿಕ್‌, ರಾಜಾಜಿನಗರ, ರೇಸ್‌ಕೋರ್ಸ್‌ ರಸ್ತೆ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಗರಿಷ್ಠ 20 ಮಿ.ಮೀ.ನಷ್ಟು ಮಳೆ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next