Advertisement

3 ದಿನದಲ್ಲಿ ಮುಂಗಾರು ರಾಜ್ಯಾದ್ಯಂತ ವಿಸ್ತರಣೆ

01:00 AM Jun 21, 2019 | Sriram |

ಬೆಂಗಳೂರು: ಕೊನೆಗೂ ಮುಂಗಾರು ಮಾರುತಗಳು ರಾಜ್ಯ ಪ್ರವೇಶಿಸಿದ್ದು, ಮುಂದಿನ ಮೂರ್‍ನಾಲ್ಕು ದಿನಗಳಲ್ಲಿ ಬಹುತೇಕ ಎಲ್ಲ ಜಿಲ್ಲೆಗಳಿಗೆ ವಿಸ್ತರಣೆ ಆಗುವ ಸಾಧ್ಯತೆಯಿದೆ.

Advertisement

ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿ ಮುಂಗಾರು ಮಳೆ ಶುರುವಾಗುತ್ತಿತ್ತು. ಆದರೆ ಈ ಬಾರಿ ಸುಮಾರು 10 ದಿನಗಳು ತಡವಾಗಿದ್ದು, ಬುಧವಾರ ಮಧ್ಯಾಹ್ನದ ನಂತರ ಚುರುಕುಗೊಂಡಿದೆ. ಗುರುವಾರ ಕರಾವಳಿಯ ಎಲ್ಲ ಜಿಲ್ಲೆಗಳು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಆಯ್ದ ಜಿಲ್ಲೆಗಳನ್ನು ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ಸ್ಪಷ್ಟಪಡಿಸಿದೆ.

‘ಜೂ.14ರಂದು ಮುಂಗಾರು ರಾಜ್ಯ ಪ್ರವೇಶಿಸಿದ್ದು, ಮುಂದಿನ ಮೂರು ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ ಆಗಲಿದೆ. ಸಾಮಾನ್ಯವಾಗಿ ಮೊದಲ ವಾರದಲ್ಲೇ ಮುಂಗಾರು ಮಾರುತಗಳು ಮಳೆ ಸುರಿಸಬೇಕಿತ್ತು. ಆದರೆ, ‘ವಾಯು’ ಚಂಡಮಾರುತದಿಂದ ತುಸು ವಿಳಂಬವಾಯಿತು’ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿಯ ನಿರ್ದೇಶಕ ಸಿ.ಎಸ್‌. ಪಾಟೀಲ ‘ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಮುಂಗಾರು ಚುರುಕುಗೊಂಡ ಪರಿಣಾಮ ಮುಂದಿನ ಐದು ದಿನಗಳಲ್ಲಿ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದ್ದು, ಅಲ್ಲಲ್ಲಿ ಭಾರಿಯಿಂದ ಅತಿ ಭಾರಿ ಮಳೆಯ ನಿರೀಕ್ಷೆ ಇದೆ. ಧಾರವಾಡ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಚಾಮರಾಜನಗರದಲ್ಲಿ ನೈರುತ್ಯ ಮಾರುತಗಳ ಪ್ರವೇಶ ಆಗಿದೆ. ಈ ಪೈಕಿ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳು ಚದುರಿದಂತೆ ಮಳೆ ಆಗಲಿದ್ದು, ಜೂನ್‌ 22ರಿಂದ 24ರವರೆಗೆ ವ್ಯಾಪಕ ಮಳೆಯ ನಿರೀಕ್ಷೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next