Advertisement
ಸದ್ಯ ಕೇರಳದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಇದು ಅರಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮುಂಗಾರು ಮಾರುತಗಳ ಜಂಟಿ ಪರಿಣಾಮ. ಉಡುಪಿ, ದಕ್ಷಿಣ ಕನ್ನಡ ಸಹಿತ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೂ ಸೋಮ ವಾರ ಸಂಜೆಯಿಂದಲೇ ಧಾರಾಕಾರ ಮಳೆಯಾಗುತ್ತಿದೆ. ಮುಂದಿನ 24 ತಾಸುಗಳ ಅವಧಿಯಲ್ಲಿ ಕೇರಳದ ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬಿ ಸಮುದ್ರದ ನೈಋತ್ಯ ಭಾಗ ದಲ್ಲಿ ಸೃಷ್ಟಿ ಯಾಗಿರುವ ವಾಯುಭಾರ ಕುಸಿತ ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದೆ.ಇದು ಮಂಗಳವಾರದ ಹೊತ್ತಿಗೆ ಚಂಡಮಾರುತ ವಾಗಲಿದ್ದು, ಜೂ.3ರಂದು ಮಹಾರಾಷ್ಟ್ರ ಮತ್ತು ಗುಜರಾತ್ ಕರಾವಳಿಗೆ ಅಪ್ಪಳಿಸಲಿದೆ. ಇದಕ್ಕೆ “ನಿಸರ್ಗ’ ಎಂದು ಹೆಸರಿಡಲಾಗಿದೆ. ಕರ್ನಾಟಕ,ಕೇರಳ,ಗೋವಾಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ಕರಾವಳಿಯಲ್ಲೂ ಭಾರೀ ಮಳೆ ಜತೆಗೆ ವೇಗದ ಗಾಳಿ ಬೀಸ ಲಿದ್ದು, ಮೀನುಗಾರರು ಸಮುದ್ರಕ್ಕಿಳಿ ಯದಂತೆ ಎಚ್ಚರಿಕೆ ನೀಡಲಾಗಿದೆ.