Advertisement

ಕರಾವಳಿ: ಈ ವಾರ ಭಾರೀ ಮಳೆ ಸಂಭವ

06:00 AM Jul 03, 2018 | |

ಹೊಸದಿಲ್ಲಿ/ಬೆಂಗಳೂರು: ಜು. 4ರಿಂದ 7ರ ವರೆಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ ಲಕ್ಷಣಗಳಿವೆ. ಅದೇ ರೀತಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲೂ ಉತ್ತಮ ಮಳೆಯಾಗಲಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಪ್ರದೇಶ ಸಹಿತ ದೇಶದ ಬಹುತೇಕ ಪ್ರದೇಶಗಳಲ್ಲಿ ಈ ವಾರ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ನೆಚ್ಚರಿಕೆ ನೀಡಿದೆ. ಅದರಲ್ಲೂ ಜು. 6 ಮತ್ತು 7ರಂದು ಉತ್ತರದ ಧಾರವಾಡ ಮತ್ತಿತರ ಭಾಗ ಹಾಗೂ ದಕ್ಷಿಣದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮಡಿಕೇರಿಯಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಇಲಾಖೆ ತಿಳಿಸಿದೆ.

Advertisement

ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಹಿಮಾಚಲ ಪ್ರದೇಶ, ಉತ್ತರಾ ಖಂಡ, ಪಂಜಾಬ್‌, ಹರಿಯಾಣದ ಉತ್ತರ ಭಾಗ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ, ಝಾರ್ಖಂಡ್‌ ಸಹಿತ ಹಲವು ಸ್ಥಳಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕೆಲವೆಡೆ ರಭಸವಾಗಿ ಗಾಳಿಯೂ ಬೀಸಲಿದೆ. ವಾರಾಂತ್ಯ ದವರೆಗೂ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next