ಬಂಟ್ವಾಳ : ಸರಕಾರ ಶ್ರೀಮಂತ ವಿದ್ಯಾರ್ಥಿಗಳಂತೆಯೇ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳಿಗೂ ಎಲ್ಲ ಸೌಲಭ್ಯ ಸಿಗುವಂತೆ ಹಲವು ಯೋಜನೆಗಳನ್ನು ತಂದಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದುಪಯೋಗಪಡಿಸಿ ಕೊಂಡು ಉತ್ತಮ ಪ್ರಜೆಯಾಗುವುದ ರೊಂದಿಗೆ ಬಲಿಷ್ಠ ರಾಷ್ಟ್ರವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಆಹಾರ ಸಚಿವ ಯು.ಟಿ. ಖಾದರ್ ತಿಳಿಸಿದರು.
ಬಂಟ್ವಾಳ ತಾ|ನ ನರಿಂಗಾನ ಗ್ರಾಮದ ಮೊಂಟೆಪದವು ಸರಕಾರಿ ಪ.ಪೂ. ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ,
ಸುಮಾರು 50 ಲ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಶಿಲಾನ್ಯಾಸಗೈದು ಮಾತನಾಡಿದರು.
ಗ್ರಾಮೀಣ ಪ್ರದೇಶವಾದ ಈ ಶಾಲೆಯು ಈಗ ಹಂತ ಹಂತವಾಗಿ ಅಭಿವೃದ್ಧಿಯಾಗುತ್ತಿದ್ದು, ಇಲ್ಲಿಯ ಮೂಲ ಸೌಲಭ್ಯಗಳು ವಿಸ್ತಾರಗೊಂಡಿವೆೆ. ಸುಮಾರು 50 ಲ.ರೂ. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣಗೊಳ್ಳಲಿದೆ. ಉತ್ತಮ ಶಿಕ್ಷಣ ನೀಡುವಲ್ಲಿ ಸರಕಾರ ಈಗಾಗಲೇ ಕ್ಷೀರ ಭಾಗ್ಯದಂತಹ ಹಲವಾರು ಉತ್ತಮ ಯೋಜನೆ ಜಾರಿಗೊಳಿಸಿದೆ ಎಂದರು.
ಜಿ.ಪಂ. ಸದಸ್ಯೆ ಮಮತಾ ಡಿ.ಎಸ್. ಗಟ್ಟಿ ಮಾತನಾಡಿ, ಆದರೆ ಈಗ ಶಿಕ್ಷಣಕ್ಕೆ ಸರಕಾರದ ವತಿಯಿಂದ ಉತ್ತಮ ಪ್ರೋತ್ಸಾಹ ಸಿಗುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿ
ಕೊಂಡು ಮುನ್ನಡೆಯಬೇಕು ಎಂದರು.
ಸರಕಾರದಿಂದ ಕೊಡಮಾಡಿದ ಉಚಿತ ಸೈಕಲ್‌ಗಳನ್ನು ಸಚಿವರು ವಿದ್ಯಾರ್ಥಿಗಳಿಗೆ ವಿತರಿಸಿದರು. ನರಿಂಗಾನ ಗ್ರಾ.ಪಂ. ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾ| ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಪ್ರೌಢ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮುರಳೀಧರ ಶೆಟ್ಟಿ, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ್ ಪಿ. ಕರ್ಕೇರ, ಸದಸ್ಯ ಹೈದರ್ ಕೈರಂಗಳ, ಗ್ರಾ. ಪಂ. ಉಪಾಧ್ಯಕ್ಷೆ ನಳಿನಾಕ್ಷಿ, ಸದಸ್ಯರಾದ ಅಬ್ದುಲ್ ಲತೀಫ್ ಕಾಪಿಕಾಡ್, ಅಬ್ದುಲ್ ರಹಿಮಾನ್, ಅಬೂಬಕ್ಕರ್ ಆಳ್ವರಬೆಟ್ಟು, ಮಹಮ್ಮದ್, ಕಾಂಗ್ರೆಸ್ ಮುಖಂಡರಾದ ಪದ್ಮನಾಭ ನರಿಂಗಾನ, ಸಿದ್ದಿಕ್ ಪಾರೆ, ನಾಸೀರ್ ನಡುಪದವು, ನಾಸೀರ್ ಸಾಮಣಿಗೆ, ಐತಪ್ಪ ಶೆಟ್ಟಿ ಹಾಗೂ ಗಂಗಾಧರ್ ಮೊದಲಾದವರು ಉಪಸ್ಥಿತರಿದ್ದರು.
ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಂತೋಷ್ ಕುಮಾರ್ ಟಿ.ಎನ್. ಸ್ವಾಗತಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಜಲೀಲ್ ಮೋಂಟುಗೋಳಿ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜು ಪ್ರಾಂಶುಪಾಲೆ ಮಮತಾ ವಂದಿಸಿದರು.
ಶೈಕ್ಷಣಿಕವಾಗಿ ಸಬಲರಾಗಿ
ವಿದ್ಯಾರ್ಥಿಗಳು ಮಾನವೀಯ ಮೌಲ್ಯ
ಬೆಳೆಸಿಕೊಂಡು ಉತ್ತಮ ಭವಿಷ್ಯ ಕಂಡುಕೊಳ್ಳಬೇಕು. ನಾವು ಸಾಮಾಜಿಕ, ಆರ್ಥಿಕವಾಗಿ ಸಬಲರಾಗಬೇಕಾದರೆ ಮೊದ
ಲಿಗೆ ನಾವು ಶೈಕ್ಷಣಿಕವಾಗಿ ಸಬಲರಾಗಬೇಕಾಗಿದೆ. ಆದ್ದರಿಂದ ವಿದ್ಯೆ, ಜ್ಞಾನ ಕೌಶಲದ ವಿಸ್ತರಣೆಗೆ ಹೆಚ್ಚಿನ ಒತ್ತುಕೊಟ್ಟು ತಂದೆ ತಾಯಿ ಹಾಗೂ ದೇಶದ ಸಂಪತ್ತಾಗಿ ರೂಪುಗೊಳ್ಳಬೇಕು.
– ಯು.ಟಿ. ಖಾದರ್, ಆಹಾರ ಸಚಿವ