ಮಂಡ್ಯ: ಘನತ್ಯಾಜ್ಯ ನಿರ್ವಹಣೆಗೆ ಸಂಬಂಸಿದಂತೆ ತಿಂಗಳೊಳಗೆ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳು ಯೋಜನೆ ರೂಪಿಸದಿದ್ದಲ್ಲಿ ಅಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ರಾಷ್ಟ್ರೀಯ ಹಸಿರು ನ್ಯಾಯಾೕಧಿಕರಣದ ರಾಜ್ಯ ಸಮಿತಿ ಅಧ್ಯಕ್ಷ ಸುಭಾಷ್ ಬಿ.ಅಡಿ ಎಚ್ಚರಿಕೆ ನೀಡಿದರು.
ನಿರ್ವಹಣೆ ಕೊರತೆ: ಘನ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕ ನಿರ್ವಹಣೆ ಮಾಡದಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಸಮಿತಿ ರಚಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿರುವ ಸಮಿತಿ ಅದರ ಸಮರ್ಪಕ ಅನುಷ್ಠಾನ ಮಾಡಬೇಕಾಗಿದೆ. ಇನ್ನೂ ಪರಿಣಾಮಕಾರಿಯಾಗಿ ಮಾಡದ ಕಾರಣ ಎಲ್ಲ ಜಿಲ್ಲೆಗಳಿಗೂ ತೆರಳಿ ಸಭೆ ನಡೆಸಿ ಸೂಚನೆ ನೀಡಲಾಗುತ್ತಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಒಟ್ಟಾರೆ ಪ್ರತಿನಿತ್ಯ 11,600 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಬೆಂಗಳೂರು ಒಂದರಲ್ಲೆ 5,600 ಮೆಟ್ರಿಕ್ ಟನ್ ಉತ್ಪಾದನೆಯಾದರೆ, ಮಂಡ್ಯ ಜಿಲ್ಲೆಯಲ್ಲಿ 128.44 ಮೆಟ್ರಿಕ್ ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಈ ಪೈಕಿ 60 ಮೆಟ್ರಿಕ್ ಟನ್ ಮಂಡ್ಯ ನಗರವೊಂದರಲ್ಲೇ ಉತ್ಪತ್ತಿಯಾಗುತ್ತದೆ ಎಂದರು.
ಜನಸಾಮಾನ್ಯರ ಸಹಭಾಗಿತ್ವ: ಘನತ್ಯಾಜ್ಯ ವಸ್ತುಗಳ ನಿರ್ವಹಣೆ ಕುರಿತಂತೆ ಜನಸಾಮಾನ್ಯರ ಸಹಭಾಗಿತ್ವವೂ ಅಷ್ಟೇ ಮುಖ್ಯ. ಬೆಂಗಳೂರಿನಂತಹ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿರುವ ಅಪಾರ್ಟ್‌ಮೆಂಟ್‌ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಿಕೊಳ್ಳುವುದು ಕಡ್ಡಾಯವಾಗಿದೆ. ಸಮುದಾಯ ಭವನಗಳಲ್ಲೂ ಕೇಂದ್ರಗಳನ್ನು ಸ್ಥಾಪಿಸಬೇಕು ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ಪರಿಸರ ಮಾಲಿನ್ಯ ಅಕಾರಿಗಳು ಅರಿವು ಮೂಡಿಸಬೇಕು ಎಂದು ತಿಳಿಸಿದರು.
Advertisement
ಶನಿವಾರ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು, ಆರೋಗ್ಯ ಮತ್ತು ಇತರೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ. ಅನುಷ್ಠಾನಗೊಳಿಸಲು ವಿಫಲವಾದಲ್ಲಿ ಕಲಂ 15ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹಸಿರು ನ್ಯಾಯಾೕಧಿಕರಣ ಮತ್ತು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.
Related Articles
Advertisement
ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಸಮರ್ಪಕವಾಗಿ ನಿಯಮಗಳನ್ನು ರೂಪಿಸಲು ಚಿಂತನೆ ನಡೆಸಲಾಗಿದೆ. ಅದಕ್ಕೆ ಸಂಬಂಧಿಸಿದಂತೆ ಅಕಾರಿಗಳು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. ದೊಡ್ಡ ಮಟ್ಟದ ದಂಡ ಅಂದರೆ ಪ್ರಥಮ ಬಾರಿ ತಪ್ಪು ಎಸಗಿದಲ್ಲಿ 25 ಸಾವಿರ ರೂ., ಎರಡನೇ ಬಾರಿಯೂ ಪುನರಾವರ್ತನೆಯಾದಲ್ಲಿ 50 ಸಾವಿರ ರೂ. ಮತ್ತೂ ಮುಂದುವರಿದಲ್ಲಿ ಅವರ ಪರವಾನಗಿಯನ್ನೇ ರದ್ದುಪಡಿಸುವಂತಹ ಶಿಕ್ಷೆಗಳನ್ನು ವಿಸುವಂತಹ ಕಾನೂನು ರೂಪಿಸಲಾಗುತ್ತಿದೆ ಎಂದು ಹೇಳಿದರು.
ಪ್ಲಾಸ್ಟಿಕ್ ನಿಷೇಧ: ಈಗಾಗಲೇ ರಾಷ್ಟ್ರಾದ್ಯಂತ ಪ್ಲಾಸ್ಟಿಕ್ ನಿಷೇಧ ಮಾಡಲಾಗಿದೆ. ರಾಜ್ಯವಾರು ಶಿಸ್ತು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧ ಮಾಡಲು ಆಗುತ್ತಿಲ್ಲ. ಈ ಹಿನ್ನಲೆಯಲ್ಲಿ ಮಾರುವವರು ಮತ್ತು ಕೊಂಡುಕೊಳ್ಳುವವರಿಗೆ ದಂಡ ವಿಸಿದರೆ ಸ್ವಲ್ಪ ಮಟ್ಟಿನ ಜಾಗೃತಿ ಮೂಡಲಿದೆ ಎಂದು ಹೇಳಿದರು.
ಸಮುದಾಯ ಭವನಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಸ್ಥಳೀಯ ಸಂಸ್ಥೆಗಳು ಅವರಿಗೆ ಎಚ್ಚರಿಕೆ ನೀಡಬೇಕು. ಹಿಂದೆ ಇದ್ದಂತೆ ಸ್ಟೀಲ್ ತಟ್ಟೆ, ಲೋಟಗಳನ್ನು ಬಳಸುವುದನ್ನು ಪ್ರೋತ್ಸಾಹಿಸಬೇಕು. ಉತ್ಕೃಷ್ಟ ದರ್ಜೆಯ ಸ್ವಚ್ಛತೆ ಅಳವಡಿಸಿಕೊಂಡು, ಗುಣಮಟ್ಟದ ನೀರನ್ನು ಸರಬರಾಜು ಮಾಡುವಂತಹ ಕ್ರಮಗಳನ್ನು ಅನುಸರಿಸುವುದು ಅಗತ್ಯ ಎಂದು ಹೇಳಿದರು.
ಜಿಲ್ಲಾಧಿಕಾರಿ ಡಾ. ಪಿ.ಸಿ.ಜಾಫರ್, ಆರೋಗ್ಯ ಇಲಾಖೆಯ ಉಪನಿರ್ದೇಶಕ ಡಾ. ವಿವೇಕ್‌ದೊರೆ, ಡಾ.ರಮೇಶ್, ಪೌರಾಡಳಿತ ಇಲಾಖೆಯ ಮುಖ್ಯ ಅಭಿಯಂತರ ಸೋಮೇಶ್, ಲೋಕನಾಥ್, ರಮೇಶ್, ನಾಗೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಕಾರಿ ಡಾ. ಎಚ್.ಪಿ. ಮಂಚೇಗೌಡ ಇತರರಿದ್ದರು.
ವಾರ್ಡ್‌ವಾರು ಗೊಬ್ಬರ ಕೇಂದ್ರ:
ಘನತ್ಯಾಜ್ಯ ಸಮರ್ಪಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಮಂಡ್ಯ ನಗರದ ಪ್ರತಿ ವಾರ್ಡ್‌ವಾರು ಮಿಶ್ರ ಗೊಬ್ಬರ ತಯಾರಿಕಾ ಘಟಕ ಸ್ಥಾಪಿಸಲು ಸೂಚಿಸಲಾಗಿದೆ. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಸಿ, ಒಣ ಮತ್ತು ಅಪಾಯಕಾರಿ ತ್ಯಾಜ್ಯ ವಸ್ತುಗಳನ್ನು ಬೇರೆ ಬೇರೆ ವಿಂಗಡನೆ ಮಾಡಿ ವಾಹನಗಳಿಗೆ ಹಾಕುವಂತೆ ಜನರಲ್ಲಿ ಅರಿವು ಮೂಡಿಸುವಂತೆ ಸೂಚಿಸಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾೕಧಿಕರಣದ ರಾಜ್ಯ ಸಮಿತಿ ಅಧ್ಯಕ್ಷ ಸುಭಾಷ್ ಬಿ.ಅಡಿ ಹೇಳಿದರು. ಘನತ್ಯಾಜ್ಯ ವಸ್ತುಗಳು ಭೂಮಿ ಮೇಲೆ ಹಾಕುತ್ತಿರುವು ದರಿಂದ ಅದರಲ್ಲಿರುವ ರಾಸಾಯನಿಕಗಳು ಭೂಮಿಯೊಳಗೆ ಸೇರಿ ಅಂತರ್ಜಲ ಕಲುಷಿತಗೊಳ್ಳುತ್ತಿದೆ. ಇದರಿಂದ ಹಸಿ, ಒಣ ಹಾಗೂ ಅಪಾಯಕಾರಿ ತ್ಯಾಜ್ಯವನ್ನು ಕಡ್ಡಾಯವಾಗಿ ಮನೆಗಳಲ್ಲೇ ವಿಂಗಡನೆ ಮಾಡಿ ಸಂಗ್ರಹಿಸಬೇಕು. ಇದು ಸಾಧ್ಯವಾಗದಿದ್ದಲ್ಲಿ ಸಮುದಾಯ ಗೊಬ್ಬರ ತಯಾರಿಕಾ ಘಟಕಗಳನ್ನು ಸ್ಥಾಪಿಸಿ ಗೊಬ್ಬರವನ್ನು ರೈತರಿಗೆ ಕಡಿಮೆ ದರದಲ್ಲಿ ನೀಡಲು ಯೋಜನೆ ರೂಪಿಸಬೇಕು ಎಂದು ಸೂಚಿಸಿದ್ದೇವೆ ಎಂದರು.