ಬೆಂಗಳೂರು: ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ 7,000 ರೂ.ಏರಿಕೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಣೆ ಮಾಡಿದರು.
ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡ ಎರಡು ದಿನಗಳ ಅಹೋರಾತ್ರಿ ಪ್ರತಿಭಟನ ಸ್ಥಳಕ್ಕೆ ಭೇಟಿ ನೀಡಿ, ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಪ್ರತಿ ತಿಂಗಳು ಖಾತ್ರಿಯಾಗಿ 5000 ರೂ. ಗೌರವಧನ ಪಾವತಿಯಾಗುತ್ತಿತ್ತು. ಪ್ರಸ್ತುತ 7ಸಾವಿರಕ್ಕೆ ಏರಿಕೆ ಮಾಡಲಾದ ಗೌರವಧನವನ್ನು ನೇರ ವರ್ಗಾವಣೆ ನಡೆಸಲು ಅಗತ್ಯವಿರುವ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಆಶಾ ಕಾರ್ಯಕರ್ತೆಯರ ಸಮಸ್ಯೆ ನೀಗಿಸುವ ನಿಟ್ಟಿನಲ್ಲಿ ಸರಕಾರ ಮತ್ತು ಇಲಾಖೆಯು ಕಾರ್ಯಾಚರಿಸುತ್ತಿದೆ. ಪ್ರೋತ್ಸಾಹಧನದ ವಿತರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಆಶಾ ನಿಧಿ ತಂತ್ರಾಂಶದಲ್ಲಿ ʼASHA View My Incentive’ನ್ನು ಪ್ರಾರಂಭಿಸಲಾಗಿದೆ. ಆಶಾ ಕಾರ್ಯಕರ್ತೆ ಯರು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪಡೆದ ಪ್ರೋತ್ಸಾಹಧನದ ವಿವರ ಸಿಗಲಿದೆ. ಕಾರ್ಯಕರ್ತೆ ಯರು ನಡೆಸುವ ಆರೋಗ್ಯ ಸೇವೆ ಚಟುವಟಿಕೆಗಳನ್ನು ಪರಿಗಣಿಸಿ ಪ್ರೋತ್ಸಾಹಧನವನ್ನು ಪಾರದರ್ಶಕ ವಾಗಿ ನೀಡಲಾಗುವುದು ಎಂದರು.
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ವೇತನ ನಿಗದಿ ಬೇಡಿಕೆ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚೆ ಮಾಡುತ್ತೇನೆ. ಗೃಹಲಕ್ಷ್ಮಿ ಯೋಜನೆಯಡಿ ನೀಡುವ 2,000 ರೂ. ಆಶಾ ಕಾರ್ಯಕರ್ತೆಯ
ರಿಗೂ ಅನ್ವಯ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. 5 ಲಕ್ಷ ಆರೋಗ್ಯ ವಿಮೆಯನ್ನು ಆಶಾ ಕಾರ್ಯಕರ್ತೆಯರಿಗೂ ಕಲ್ಪಿಸಲಾಗಿದೆ. ಕಾಂಗ್ರೆಸ್ ಸರಕಾರ ಮಹಿಳೆಯರ ಪರವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರು.