Advertisement
ಮಂಗಳೂರಿನ ರೊಸಾರಿಯೋ ಕೆಥೆಡ್ರಲ್ನಲ್ಲಿ ಮಂಗಳೂರು ಧರ್ಮಪ್ರಾಂತದ ಪ್ರಧಾನ ಧರ್ಮಗುರು ವಂ| ಮ್ಯಾಕ್ಸಿಂ ನೊರೊನ್ನಾ ಅವರು ಪ್ರಧಾನ ಬಲಿಪೂಜೆ ನೆರವೇರಿಸಿದರು. ಕೆಥೆಡ್ರಲ್ನ ಧರ್ಮಗುರು ವಂ| ಜೆ.ಬಿ. ಕ್ರಾಸ್ತಾ ಉಪಸ್ಥಿತರಿದ್ದರು.
Related Articles
Advertisement
ಮಹಿಳೆಯರು ಮತ್ತು ಮಕ್ಕಳು ಹೂವುಗಳನ್ನು ಕೊಂಡೊಯ್ದು ಮೇರಿ ಮಾತೆಗೆ ಅರ್ಪಿಸಿ ಭಕ್ತಿಯಿಂದ ನಮನ ಸಲ್ಲಿಸಿದರು. ದೇವಾಲಯಗಳಲ್ಲಿ ಶ್ರದ್ಧೆ ಮತ್ತು ಭಕ್ತಿಪೂರ್ವಕ ಧಾರ್ಮಿಕ ಕಾರ್ಯಗಳು ನಡೆದ ಬಳಿಕ ಭತ್ತದ ತೆನೆಯನ್ನು ಮನೆಗೆ ತಂದು ಹೊಸ ಅಕ್ಕಿಯ ಅನ್ನ ತಯಾರಿಸಿ ಕುಟುಂಬಿಕರು ಸಹಭೋಜನ ಮಾಡಿದರು.
ಮೇರಿ ಮಾತೆಯ ಜನ್ಮದಿನಯೇಸುಕ್ರಿಸ್ತರ ತಾಯಿ ಮೇರಿಮಾತೆಯ ಜನ್ಮದಿನವನ್ನು ಸೆ. 8ರಂದು ಆಚರಿಸಲಾಗುತ್ತಿದೆ. ಮೇರಿ ಮಾತೆ ದೇವಮಾತೆ ಆಗಿದ್ದು ಪವಾಡಗಳನ್ನು ಸೃಷ್ಟಿಸುತ್ತಾರೆ ಎನ್ನುವುದು ಕೆಥೋಲಿಕರ ನಂಬಿಕೆ. ಕೈಸ್ತರು ಬಾಲೆ ಮೇರಿಗೆ ನಮಿಸುವುದರ ಜತೆಗೆ ಹೊಸ ಬೆಳೆಯ ಹಬ್ಬವನ್ನು ಆಚರಿಸಿದರು. ಹೊಸ ಭತ್ತದ ತೆನೆಯನ್ನು ಕ್ರೈಸ್ತ ದೇವಾಲಯಕ್ಕೆ ಮೆರವಣಿಗೆಯಲ್ಲಿ ತಂದು ಅಲ್ಲಿ ಅದರ ಅಶೀರ್ವಚನವನ್ನು ನೆರವೇರಿಸಲಾಯಿತು.