Advertisement

ಮುಡಾ ಅಧ್ಯಕ್ಷರಾಗಿ ರವಿಶಂಕರ್‌ ಮಿಜಾರು ಅಧಿಕಾರ ಸ್ವೀಕಾರ

09:50 AM Jun 09, 2020 | sudhir |

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ನೂತನ ಅಧ್ಯಕ್ಷರಾಗಿ ಕರ್ನಾಟಕ ಸರಕಾರದಿಂದ ನೇಮಕಗೊಂಡಿರುವ ರವಿಶಂಕರ್‌ ಮಿಜಾರು ಅವರು ಸೋಮವಾರ ನಗರದ ಉರ್ವಾ ಸ್ಟೋರ್‌ನಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕ ಎನ್‌. ಯೋಗೀಶ್‌ ಭಟ್‌, ಮೇಯರ್‌ ದಿವಾಕರ ಪಾಂಡೇಶ್ವರ, ಮುಡಾ ಆಯುಕ್ತ ದಿನೇಶ್‌ ಕುಮಾರ್‌, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ. ಸುದರ್ಶನ್‌, ಬಿಜೆಪಿ ಮುಖಂಡರಾದ ನಿತಿನ್‌ ಕುಮಾರ್‌, ಸುಧೀರ್‌ ಶೆಟ್ಟಿ ಕಣ್ಣೂರು, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ, ಸತೀಶ್‌ ಕುಂಪಲ, ವಿಜಯ ಕುಮಾರ್‌ ಶೆಟ್ಟಿ, ಈಶ್ವರ ಕಟೀಲು, ರಣದೀಪ್‌ ಕಾಂಚನ್‌ ಉಪಸ್ಥಿತರಿದ್ದರು.

ರವಿಶಂಕರ ಮಿಜಾರ್‌ ಅವರು ಕಾನೂನು ಪದವೀಧರರಾಗಿದ್ದು, ಸುಮಾರು ನಾಲ್ಕು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಮಂಗಳೂರು ನಗರ ದಕ್ಷಿಣ ಕ್ಷೇತ್ರ ಅಧ್ಯಕ್ಷ, ಬಿಜೆಪಿ ಜಿಲ್ಲಾ ವಕ್ತಾರ ಸೇರಿಂದಂತೆ ವಿವಿಧ ಹುದ್ದೆ ಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯದ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಕೆಲಸಗಳು ತ್ವರಿತ
ಈ ಸಂದರ್ಭದಲ್ಲಿ ರವಿಶಂಕರ್‌ ಮಿಜಾರು ಅವರು ಮಾತನಾಡಿ, ಮಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಹಾಕಿಕೊಂಡು ಶ್ರಮಿಸು ತ್ತೇನೆ. ಮುಡಾದಲ್ಲಿ ಸಾರ್ವಜನಿಕರ ಕೆಲಸಗಳು ವಿಳಂಬವಿಲ್ಲದೆ ತ್ವರಿತಗತಿಯಲ್ಲಿ ಆಗುವಂತೆ ನೋಡಿ ಕೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next