Advertisement

Moodbidri: ಡಿ. 10 -15: ಆಳ್ವಾಸ್‌ ವಿರಾಸತ್‌-2024

12:44 AM Oct 01, 2024 | Team Udayavani |

ಮೂಡುಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವಾಗಿರುವ “ಆಳ್ವಾಸ್‌ ವಿರಾಸತ್‌’ ವಿದ್ಯಾಗಿರಿಯ ಆವರಣದಲ್ಲಿ ಡಿ.10ರಿಂದ 15ರ ವರೆಗೆ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

Advertisement

ವಿರಾಸತ್‌ಗೆ ಈ ಬಾರಿ 30 ವರ್ಷವಾಗಲಿದ್ದು, ಒಟ್ಟು 6 ದಿನಗಳ ಕಾಲ ವೈಭವೋಪೇತವಾಗಿ ಜರಗಲಿದೆ. ಇದನ್ನು ಅತ್ಯಂತ ಯಶಸ್ವಿ ಉತ್ಸವವಾಗಿಸಲು ಸಿದ್ಧತೆ ನಡೆಯುತ್ತಿದೆ. ಮೊದಲ 5ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಗಳೇ ಮೊದಲಾದ ವಸ್ತು ಪ್ರದರ್ಶನಗಳಿಗೆ ಅವಕಾಶವಿದ್ದು, ಕೊನೆಯ ದಿನವಾದ ಡಿ.15ರ ರವಿವಾರವನ್ನು ಕೇವಲ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ.

ಈ ಹಿಂದಿನಂತೆಯೇ ಸಾರ್ವಜನಿಕರಿಗೆ ಸಂಪೂರ್ಣ ಉಚಿತ ಪ್ರವೇಶವಿದೆ. ಸಂಸ್ಕೃತಿಪ್ರಿಯರು ಹಾಗೂ ಕಲಾಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next