ಮೂಡಬಿದಿರೆ: ಹಲವಾರು ಶೈಕ್ಷಣಿಕ ಚಟುವಟಿಕೆಗಳನ್ನೂ ನಡೆಸುವ ದೈಹಿಕ ಶಿಕ್ಷಣ ಶಿಕ್ಷಕರು ತಮ್ಮ ವೃತ್ತಿಯಲ್ಲಿ ಯಾವುದೇ ಭಡ್ತಿ ಇಲ್ಲದೆ ಅದೇ ವೃತ್ತಿಯಲ್ಲಿ ನಿವೃತ್ತಿ ಹೊಂದುವ ದುಸ್ಥಿತಿಯಲ್ಲಿದ್ದಾರೆ. ನಾಗರಿಕ ಸೇವಾ ನಿಯಮಗಳನ್ನು ತಿದ್ದುಪಡಿ ಮಾಡಿ ದೈಹಿಕ ಶಿಕ್ಷಣ ಶಿಕ್ಷಕರಿಗೆ ನ್ಯಾಯ ಒದಗಿಸಿಬೇಕಾಗಿದೆ ಎಂದು ದ.ಕ. ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಎಚ್. ನಾಯಕ್ ಆಗ್ರಹಿಸಿದರು.
ಕರ್ನಾಟಕ ರಾಜ್ಯ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮಂಗಳೂರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮೂಡಬಿದಿರೆ ಇವುಗಳ ಆಶ್ರಯದಲ್ಲಿ ನೇತಾಜಿ ಸುಭಾಶ್ಚಂದ್ರ ಬೋಸ್ ಅವರ 121ನೇ ಜನ್ಮದಿನದ ಪ್ರಯುಕ್ತ ಮೂಡಬಿದಿರೆ ಸ್ವರಾಜ್ಯ ಮೈದಾನದ ಕ್ರೀಡಾಂಗಣದಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ – ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ 2018ನೇ ಸಾಲಿನ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಧ್ವಜಾರೋಹಣಗೈದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಕ್ರೀಡಾಕೂಟ ಉದ್ಘಾಟಿಸಿದರು. ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸ್ವಾಮಿ ಸೇವಾ ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ ಮುಖ್ಯಅತಿಥಿಯಾಗಿದ್ದರು.
ಪ್ರಧಾನ ಅತಿಥಿಗಳಾಗಿ ಜಿ.ಪಂ. ಸದಸ್ಯ ಕೆ.ಪಿ. ಸುಚರಿತ ಶೆಟ್ಟಿ, ಡಿಡಿಪಿಐ ಶಿವರಾಮಯ್ಯ, ಕ್ಷೇತ್ರಶಿಕ್ಷಣಾಧಿಕಾರಿ ಎ. ಬಿ. ಕುಟಿನ್ಹೋ, ಜಿಲ್ಲಾ ದೈ.ಶಿ. ಅಧಿಕಾರಿ ರಘನಾಥ, ಕ್ಷೇತ್ರ ದೈ.ಶಿ. ಪರಿವೀಕ್ಷಣಾಧಿಕಾರಿ ಶಿವಾನಂದ ಕಾಯ್ಕಿಣಿ, ಸುವರ್ಣ ಸಂಭ್ರಮದ ರೋಟರಿ ಅಧ್ಯಕ್ಷ ಶ್ರೀಕಾಂತ ಕಾಮತ್, ಮೂಡಬಿದಿರೆ ಕ್ಷೇತ್ರ ಜೆಡಿಎಸ್ ಅಧ್ಯಕ್ಷ ಅಶ್ವಿನ್ ಜೆ. ಪಿರೇರಾ, ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಸುದರ್ಶನ ಎಂ., ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಕಾರ್ಯದರ್ಶಿ ರುಕ್ಕಯ ಪೂಜಾರಿ, ಕುವೆಂಪು ವಿವಿ ಮಾಜಿ ಸಿಂಡಿಕೇಟ್ ಸದಸ್ಯ ಎಸ್.ಪಿ. ದಿನೇಶ್, ಕೊಡಗು ಟೀಚರ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ. ಕೆ. ಮಂಜುನಾಥ್ ಕುಮಾರ್ ಕುಶಾಲ್‌ನಗರ, ಉದ್ಯಮಿ ನಾರಾಯಣ ಪೂಜಾರಿ ಬೋರುಗುಡ್ಡೆ, ಪ್ರಸ್‌ಕ್ಲಬ್ ಅಧ್ಯಕ್ಷ ಬಿ. ಸೀತಾರಾಮ ಆಚಾರ್ಯ, ನಿವೃತ್ತ ದೈ.ಶಿ.ಶಿ. ನರಸಿಂಹ ಮಡಿವಾಳ, ಧವಲಾ ಕಾಲೇಜಿನ ದೈ.ಶಿ.ನಿ. ಶಾಂತಿ ರಾಜ ಕಾಂಬ್ಳಿ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಮ ಕೃಷ್ಣ ಶಿರೂರು, ಮೂಡಬಿದಿರೆ ಪ್ರಾ. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಎಸ್., ಎಲ್ಲೈಸಿ ಅಭಿವೃದ್ಧಿ ಅಧಿಕಾರಿ ಮುನ್ನಾರಾವ್
ಮುಖ್ಯ ಅತಿಥಿಗಳಾಗಿದ್ದರು.
ದೈ.ಶಿ.ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಶೇಖರ ಕಡ್ತಲ, ಕೋಶಾಧಿಕಾರಿ ಅಖೀಲ್ ಶೆಟ್ಟಿ, ತಾಲೂಕು ಅಧ್ಯಕ್ಷ ಪ್ರಶಾಂತ್ ಜೈನ್, ಪ್ರ. ಕಾರ್ಯದರ್ಶಿ ರಾಜೀವ ಶೆಟ್ಟಿ ಎಂ., ಕೋಶಾಧಿಕಾರಿ ಗೋವರ್ಧನ ಎಂ., ಪ್ರಾಂತ್ಯ ಸರಕಾರಿ
ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ರಾಜಶ್ರೀ ಬಿ. ಉಪಸ್ಥಿತರಿದ್ದರು. ಶಿವಾನಂದ ಕಾಯ್ಕಿಣಿ ಸ್ವಾಗತಿಸಿದರು. ನವೀನ್‌ಚಂದ್ರ ಅಂಬೂರಿ ನಿರೂಪಿಸಿದರು. ರಾಜೀವ ಶೆಟ್ಟಿ ವಂದಿಸಿದರು. ಜಿಲ್ಲೆಯ 510 ಮಂದಿ ದೈಹಿಕ ಶಿಕ್ಷಣ ಶಿಕ್ಷಕರು ಕೂಟದಲ್ಲಿ ಪಾಲ್ಗೊಂಡಿದ್ದರು.